ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭೀಕರ ಉಗ್ರದಾಳಿಯಲ್ಲಿ ಬೆಂಗಳೂರಿನ ಜೆ.ಪಿ. ಪಾರ್ಕ್ ನಿವಾಸಿ ಹಾಗೂ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಮೂಲದ ಭರತ್ ಭೂಷಣ್ (41) ಮತ್ತು ಶಿವಮೊಗ್ಗದ ಮಂಜುನಾಥ್ ದುರ್ಮರಣಕ್ಕೀಡಾಗಿದ್ದಾರೆ.
ಅಂಡರ್‌ವಲ್ಡ್ ಹಿನ್ನೆಲೆ ಹೊಂದಿದ್ದ ಮಾಜಿ ಡಾನ್ ಮುತ್ತಪ್ಪ ರೈ ಅವರ ಹಿರಿಯ ಪುತ್ರ ರಾಕಿ ರೈ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಖಾಸಗಿ ಭೇಟಿಗೆ ಆಗಮಿಸಿದ್ದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಕೇಂದ್ರ ಸರ್ಕಾರ ಇಂಧನ ಹಾಗೂ ಅಡುಗೆ ಅನಿಲದ ಬೆಲೆ ಏರಿಸಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಎಪ್ರಿಲ್ 26ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧಾರ್ಮಿಕ ಹಾಗೂ ಪ್ರವಾಸಿ ತಾಣವಿರುವ ಕುಂದಾದ್ರಿ ಬೆಟ್ಟದ ಮೆಟ್ಟಿಲು ರಸ್ತೆಯ ಮೊದಲ ತಿರುವಿನಲ್ಲಿ ಸುಟ್ಟ ಸ್ಥಿತಿಯ ಮಾನವ ದೇಹವೊಂದು ಪತ್ತೆಯಾಗಿದೆ. ಈ ಘಟನೆ ಸೋಮವಾರ ರಾತ್ರಿ ಬೆಳಕಿಗೆ ಬಂದಿದೆ.