ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡ್ಡಾಂನಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ₹18 ಲಕ್ಷ ರೂಪಾಯಿ ಅನುದಾನ ಮಂಜೂರಾಗಿದ್ದು, ಇಂದು ಅದಕ್ಕೆ ವಿಧ್ಯುಕ್ತವಾಗಿ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಬಿಜೆಪಿಯ 'ಸುಳ್ಳಿನ ಪ್ರತಿಭಟನೆ'ಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ 'ಸತ್ಯದರ್ಶನ' ಪ್ರತಿಭಟನೆ ನಡೆಸಿ, ರಾಜಕೀಯ ಸಮರಕ್ಕೆ ಇಳಿದಿದೆ. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ನೇತೃತ್ವದಲ್ಲಿ ಮಂಗಳವಾರ ಅಂಬಲಪಾಡಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳಕೆ ಇರ್ವತ್ತೂರಿನಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲೆಯನ್ನು ಪರಿಚಯಿಸುವ ಉದ್ದೇಶದಿಂದ ಯಕ್ಷ ಕಲಾರಂಗ (ರಿ) ಕಾರ್ಕಳ ಮತ್ತು ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಇವರ ವತಿಯಿಂದ ಯಕ್ಷಗಾನ ತರಬೇತಿ ಶಿಬಿರಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು.