ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್ - ಬಾಲ ಸಂಸ್ಕಾರ ಸಾಪ್ತಾಹಿಕ ಸರಣಿಯಲ್ಲಿ ವಿಹಾರಾರ್ಥವಾಗಿ ಮಕ್ಕಳು ಹಿರಿಯಡ್ಕದ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಶ್ರೀ ಮಧ್ವಾಚಾರ್ಯರ ಜನ್ಮಸ್ಥಳ ಪಾಜಕ ಕ್ಷೇತ್ರ ಮಠದಲ್ಲಿ ಇತ್ತೀಚೆಗೆ ರಚಿಸಿರುವ ಕಾವಿ ಚಿತ್ರಕಲೆಯನ್ನು ಕಾಣೆಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಮಧ್ವನವಮಿಯ ಪ್ರಥಮ ದಿನದಂದು ಉದ್ಘಾಟಿಸಿದರು.
ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಪರಿಕಲ್ಪನೆಯ ‘ರಾಮರಾಜ್ಯ ಯೋಜನೆ’ಯಡಿ ಉಡುಪಿ ಜಿಲ್ಲೆ ನೀಲಾವರ ಗ್ರಾಮದ ಸತೀಶ್ ನಾಯ್ಕ ಅವರ ಕುಟುಂಬಕ್ಕಾಗಿ ನೂತನ ಗೃಹ ನಿರ್ಮಾಣ ಮಾಡಲಾಗಿದೆ.