ಉಡುಪಿಯ ಪುರಾತನ ಪ್ರಾಧಾನ್ಯ ಶಕ್ತಿಪೀಠವಾದ ಕೆಮ್ಮಣ್ಣು ಶ್ರೀ ಮಾರಿಕಾಂಬಾ ಭದ್ರಕಾಳಿ ಅಮ್ಮನವರ ದೇವಸ್ಥಾನದ ಸನ್ನಿಧಿಯಲ್ಲಿ ಶ್ರೀ ಮಾರಿಕಾಂಬಾ ಮಕ್ಕಳ ಕುಣಿತ ಭಜನಾ ಮಂಡಳಿ ಎಂಬ ಹೆಸರಿನ ಭಜನಾ ಮಂಡಳಿಯು ಶುಭಾರಂಭವಾಯಿತು.
ಬಿಜೆಪಿ ನಾಯಕ ಬಿ.ಎಲ್. ಸಂತೋಷ್ ವಿರುದ್ಧ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ನಾಯಕ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ನ ಪ್ರತಿಮೆಯನ್ನು ಮರು ಸ್ಥಾಪಿಸಲು ಸರ್ಕಾರದ ನಿರ್ದೇಶನ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದ ವ್ಯಕ್ತಿಯೊಬ್ಬರಿಗೆ ಕರ್ನಾಟಕ ಹೈಕೋರ್ಟ್ ₹5 ಲಕ್ಷ ಠೇವಣಿ ಇರಿಸುವಂತೆ ಸೂಚಿಸಿದೆ.
ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ ಹಿನ್ನೆಲೆಯಲ್ಲಿ, ಜಿಲ್ಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.