ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ವತಿಯಿಂದ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ದಿ.ಗೋಪ ಶೆಟ್ಟಿಯವರ 104ನೇ ಜನ್ಮದಿನದ ಅಂಗವಾಗಿ ಆಗಸ್ಟ್ 21ರಂದು ಸಾಮಾಜಿಕ ನೆರವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ಹೆಬ್ರಿ ಗಣೇಶೋತ್ಸವದ ಸುವರ್ಣ ಸಂಭ್ರಮದ ಪ್ರಯುಕ್ತ ಪುರುಷ ಮತ್ತು ಮಹಿಳೆಯರಿಗಾಗಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಕ್ರೀಡಾಕೂಟಕ್ಕೆ ಮಹಿಳಾ ಸಮಿತಿಯ ಸಂಚಾಲಕಿ ಬಾನು ಪಿ. ಬಲ್ಲಾಲ್ ಅವರು ಚಾಲನೆ ನೀಡಿದರು.
ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಬೀಸಿದ ಭೀಕರ ಸುಳಿಗಾಳಿ ಯರ್ಲಪಾಡಿ ಗ್ರಾಮದ ಜಾರ್ಕಳ ಅರ್ಬಿ ಪ್ರದೇಶದಲ್ಲಿ ಭಾರಿ ಹಾನಿ ಉಂಟುಮಾಡಿದೆ. ಈ ಅನಿರೀಕ್ಷಿತ ಪ್ರಕೃತಿ ವಿಕೋಪದಿಂದಾಗಿ ಹತ್ತಾರು ಮನೆಗಳು, ವಿದ್ಯುತ್ ಕಂಬಗಳು ಹಾಗೂ ಕೃಷಿ ತೋಟಗಳಿಗೆ ತೀವ್ರ ಹಾನಿಯಾಗಿದೆ.
ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.