ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋಪರೇಟಿವ್ ಲಿಮಿಟೆಡ್‌ನ ಕಾರ್ಕಳ ಶಾಖೆಯ ವತಿಯಿಂದ, ವಿಜೇತ ವಿಶೇಷ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಅಗತ್ಯ ವಸ್ತುಗಳನ್ನು ಹಸ್ತಾಂತರಿಸಲಾಯಿತು.
ಭಾರತದ 78 ನೇ ಸ್ವಾತಂತ್ರೋತ್ಸವ ಸಂಭ್ರಮದ ಪ್ರಯುಕ್ತ ಉಡುಪಿಯ ಗುಂಡಿಬೈಲಿನ ಶ್ರೀ ಅಭಿರಾಮ ಧಾಮ ಸಂಕೀರ್ತನ ಮಂದಿರದಲ್ಲಿ ಕಳೆದ ಬುಧವಾರ ಆಯೋಜನೆಗೊಂಡ ಜಿಲ್ಲಾ ಮಟ್ಟದ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ಆಗಸ್ಟ್ 15ರಂದು ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್(ರಿ.) ಉಡುಪಿ ತಾಲೂಕು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಹಿರಿಯಡಕ ವಲಯ, ಕೊಡಿಬೆಟ್ಟು ಕುದಿ 82 ಕಾರ್ಯಕ್ಷೇತ್ರದ ಧರ್ಮ ದೇವತೆ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಇಂದು ವಿಷ್ಣುಮೂರ್ತಿ ಪ್ರೌಢಶಾಲೆ, ಕೊಡಿಬೆಟ್ಟು ಕುದಿ 82 ಇಲ್ಲಿ ನಡೆಯಿತು.