ಬ್ಯಾಂಕ್ ಆಫ್ ಬರೋಡಾದ ಸಾಣೂರು ಶಾಖೆಯ ವತಿಯಿಂದ ಕೊಳಕೆ ಇರ್ವತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಲಿಕಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮ ನಡೆಯಿತು. ಶತಮಾನೋತ್ಸವ ಮುಂಬೈ ಸಮಿತಿಯ ಗೌರವಾಧ್ಯಕ್ಷರಾದ ರಮೇಶ್ ಶೆಟ್ಟಿ ಗುರಂತಿಬೆಟ್ಟು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಅರ್ಥಶಾಸ್ತ್ರ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವೇದಿಕೆ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಅರ್ಥಶಾಸ್ತ್ರ ವಿಷಯದ ಪುನಶ್ಚೇತನ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ 28 ಜುಲೈ 2025 ರಂದು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಜರುಗಿತು.
ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್.ಎಸ್.ಎಸ್.) ಹಿರಿಯ ಸ್ವಯಂಸೇವಕರು, ಕಾರ್ಕಳದ ಖ್ಯಾತ ವೈದ್ಯರು ಹಾಗೂ ಕರ್ನಾಟಕ ಕೊಂಕಣಿ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷರಾಗಿದ್ದ ಡಾ. ಜಗದೀಶ್ ಪೈ (62) ಅವರು ನಿನ್ನೆ (ಜುಲೈ 28, 2025) ಸಾಯಂಕಾಲ ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.