ಬಿಜೆಪಿಯ 'ಸುಳ್ಳಿನ ಪ್ರತಿಭಟನೆ'ಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ 'ಸತ್ಯದರ್ಶನ' ಪ್ರತಿಭಟನೆ ನಡೆಸಿ, ರಾಜಕೀಯ ಸಮರಕ್ಕೆ ಇಳಿದಿದೆ. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ನೇತೃತ್ವದಲ್ಲಿ ಮಂಗಳವಾರ ಅಂಬಲಪಾಡಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳಕೆ ಇರ್ವತ್ತೂರಿನಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲೆಯನ್ನು ಪರಿಚಯಿಸುವ ಉದ್ದೇಶದಿಂದ ಯಕ್ಷ ಕಲಾರಂಗ (ರಿ) ಕಾರ್ಕಳ ಮತ್ತು ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಇವರ ವತಿಯಿಂದ ಯಕ್ಷಗಾನ ತರಬೇತಿ ಶಿಬಿರಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು.
ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಮತ್ತು ಪ್ರತಿಮೆಯ ಕುರಿತು ಕಾಂಗ್ರೆಸಿಗರು ನಡೆಸುತ್ತಿದ್ದ ನಿರಂತರ ಅಪಪ್ರಚಾರಕ್ಕೆ ಅಂತ್ಯ ಹಾಡಲಾಗಿದೆ ಎಂದು ಕಾರ್ಕಳ ಶಾಸಕ ಮತ್ತು ಮಾಜಿ ಸಚಿವರಾದ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.