ಮಂಗಳವಾರ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಗಂಗೊಳ್ಳಿ ಅಳಿವೆ ಪ್ರದೇಶದ ಹೊರಭಾಗದಲ್ಲಿ ಮಗುಚಿ ಬಿದ್ದ ಪರಿಣಾಮ ಮೂವರು ಮೀನುಗಾರರು ನಾಪತ್ತೆಯಾಗಿದ್ದು, ಓರ್ವ ಮೀನುಗಾರನನ್ನು ರಕ್ಷಿಸಲಾಗಿದೆ.
ಕಂಚಿನ ಮೂರ್ತಿ ನಿರ್ಮಿಸಬೇಕಿದ್ದಲ್ಲಿ ಹಿತ್ತಾಳೆಯ ಮೂರ್ತಿ ನಿರ್ಮಿಸಿ ಸರ್ಕಾರಕ್ಕೆ ವಂಚಿಸಿದ ಆರೋಪದ ಮೇಲೆ ಶಿಲ್ಪಿ ಕೃಷ್ಣ ನಾಯ್ಕ, ಉಡುಪಿ ನಿರ್ಮಿತಿ ಕೇಂದ್ರದ ಪ್ರೊಜೆಕ್ಟ್ ಡೈರೆಕ್ಟರ್ ಅರುಣ್ ಕುಮಾರ್ ಹಾಗೂ ಇಂಜಿನಿಯರ್ ಸಚಿನ್ ವೈ ಕುಮಾರ್ ವಿರುದ್ಧ ಪೊಲೀಸರು 1231 ಪುಟಗಳ ದೋಷಾರೋಪಣಾ ಪಟ್ಟಿಯನ್ನು ಕಾರ್ಕಳ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
ಭಯದ ವಾತಾವರಣ ಸೃಷ್ಟಿಸಿದ್ದ ಮಾನಸಿಕ ಅಸ್ವಸ್ಥ ಯುವಕನೋರ್ವನನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದ ಅಂಬಲಪಾಡಿಯ ವಿಶು ಶೆಟ್ಟಿ ಅವರ ಮಾನವೀಯ ಪ್ರಯತ್ನದಿಂದ ಇದೀಗ ಯುವಕ ತನ್ನ ಕುಟುಂಬವನ್ನು 12 ವರ್ಷಗಳ ಬಳಿಕ ಸೇರಿಕೊಂಡಿದ್ದಾನೆ.
ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸುನಿಲ್ ಕುಮಾರ್ ಅವರ ಮಹತ್ವಾಕಾಂಕ್ಷೆಯ ಯೋಜನೆಯಾದ ಉಮ್ಮಿಕಲ್ ಬೆಟ್ಟದ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಿರ್ಮಿಸಲಾದ ಪರಶುರಾಮ ಪ್ರತಿಮೆ ಕುರಿತ ವಿವಾದಕ್ಕೆ ಇದೀಗ ತೆರೆ ಬಿದ್ದಿದೆ.