ಮೊದಲ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯದ ಪೂರ್ವಭಾವಿ ಧಾರ್ಮಿಕ ವಿಧಿಯಾದ "ಕಟ್ಟಿಗೆ ಮುಹೂರ್ತವು" ಇಂದು ಉಡುಪಿ ಶ್ರೀಕೃಷ್ಣ ಮಠದ ಪರಿಸರದಲ್ಲಿ ವಿಜೃಂಭಣೆಯಿಂದ ನಡೆಯಿತು.
ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಮಹಿಳಾ ಪ್ರಯಾಣಿಕರ ಪ್ರಯಾಣದ ಸಂಖ್ಯೆ 500 ಕೋಟಿ ತಲುಪಿದ್ದು ಈ ಐತಿಹಾಸಿಕ ಸಾಧನೆಯನ್ನು ಕಾರ್ಕಳ ಕಾಂಗ್ರೆಸ್ ವತಿಯಿಂದ ವಿಶಿಷ್ಟವಾಗಿ ಆಚರಿಸಲಾಯಿತು.
ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸಕ್ರಿಯ ಸದಸ್ಯರಾಗಿರುವ ಶ್ರೀ ರಂಜಿತ್ ಪ್ರಭು ಅವರನ್ನು ರಾಜ್ಯ ಸರ್ಕಾರವು ಉಡುಪಿ ಜಿಲ್ಲಾ ಕಾರಾಗೃಹದ ಸಂದರ್ಶಕರ ಮಂಡಳಿಗೆ ಅಧಿಕಾರೇತರ ಸದಸ್ಯರಾಗಿ ನಾಮನಿರ್ದೇಶನ ಮಾಡಿದೆ.
ಸುಭಾಷ್ ನಗರ ರೋಟರಾಕ್ಟ್ ಕ್ಲಬ್ ವತಿಯಿಂದ ಪಂಜಿ ಮಾರುವಿನಲ್ಲಿ ಯುವ ಜನತೆಯನ್ನು ಕೃಷಿಯತ್ತ ಆಕರ್ಷಿಸುವ ಮಹತ್ತರ ಉದ್ದೇಶದಿಂದ ಭತ್ತ ನಾಟಿ ಮಾಡುವ ಕಾರ್ಯಕ್ರಮವನ್ನು ಎರಡನೇ ಬಾರಿಗೆ ಆಯೋಜಿಸಲಾಗಿತ್ತು.