ಕುಕ್ಕುಂದೂರು ಗ್ರಾಮದ ಜೋಡುರಸ್ತೆಯ ಶ್ರೀ ಗಣೇಶ ಮಂಟಪದಲ್ಲಿ ಐದು ದಿನಗಳ ಕಾಲ ನಡೆದ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಾರಂಭದ ಸಮಾರೋಪ ಸಮಾರಂಭ ಕಾರ್ಯಕ್ರಮ ಮತ್ತು ಗಣಪತಿ ವಿಗ್ರಹದ ವಿಸರ್ಜನಾ ಮೆರವಣಿಗೆಯು ಅತ್ಯಂತ ವಿಜೃಂಭಣೆಯಿಂದ ದಿನಾಂಕ 31-8-2025 ರಂದು ನಡೆಯಿತು.
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಡೆದ ಉಡುಪಿ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟದಲ್ಲಿ, ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಮೋಘ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಹೆಬ್ರಿ ರಾಮ ಮಂಟಪದ ಗಣಪತಿ ಸನ್ನಿಧಿಯಲ್ಲಿ 5 ದಿನ ತ್ರಿಕಾಲ ಮಹಾಪೂಜೆ , 48 ನಾರಿಕೇಳ ಗಣಯಾಗ , ರಂಗ ಪೂಜೆ ಇತ್ಯಾದಿ ಸೇವಾದಿಗಳು ವೇದ ಮೂರ್ತಿ ನಾಗರಾಜ್ ಜೋಯಿಸ್ ರವರ ನೇತೃತ್ವದಲ್ಲಿ ನಡೆದವು .
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ತ್, ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪ್ರತಿ ವರ್ಷದಂತೆ ತಾಲೂಕಿನ ಒಂದು ಭಜನಾ ಮಂಡಳಿಗೆ ನೀಡುವ ಸಾಧಕ ಪ್ರಶಸ್ತಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.