ಯುನಿಯನ್ ಬ್ಯಾಂಕ್ ಹೆಸರಿನಲ್ಲಿ ಕರೆ ಮಾಡಿದ ಅಪರಿಚಿತ ವ್ಯಕ್ತಿಯೊಬ್ಬನು ಕೆವೈಸಿ ಅಪ್‌ಡೇಟ್ ಮಾಡುವ ನೆಪದಲ್ಲಿ ನಿವೃತ್ತ ನರ್ಸ್‌ರೊಬ್ಬರ ಖಾತೆಯಿಂದ ₹5.19 ಲಕ್ಷ ಎಗರಿಸಿರುವ ಪ್ರಕರಣ ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಬೆಳಕಿಗೆ ಬಂದಿದೆ.
ಬ್ರಹ್ಮಾವರ ತಾಲೂಕಿನ ಕುಂಜಾಲು ಗ್ರಾಮದಲ್ಲಿ ಶನಿವಾರ ತಡರಾತ್ರಿ ಪತ್ತೆಯಾದ ಹಸುವಿನ ರುಂಡ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದು, ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ.
ವಿಶ್ವ ಪರಿಸರ ದಿನದ ಪ್ರಯುಕ್ತ ಶ್ರೀ ಮಹಾಕಾಳಿ ಭಜನಾ ಮಂಡಳಿ ಮಂಗಲ್ದಿ ಮಠ ಪಳ್ಳಿ, ಕಾಮಧೇನು ಸ್ವ ಸಹಾಯ ಸಂಘ ಪಳ್ಳಿ, ಶೌರ್ಯ ವಿಪತ್ತು ಪಳ್ಳಿ ಘಟಕ ಇವರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಮಂಗಲ್ದಿ ಮಠ ದೇವಸ್ಥಾನದ ವಠಾರದಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಶ್ರೀ ಕ್ಷೇತ್ರ ಪರ್ಪಲೆ ಗಿರಿಯ ಕಲ್ಕುಡ ದೇವಸ್ಥಾನದ ಪ್ರತಿಷ್ಠಾಪನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 200000/- ದ ಡಿಡಿ ಯನ್ನು ಕಾರ್ಕಳ ತಾಲೂಕಿನ ಯೋಜನಾಧಿಕಾರಿಯವರಾದ ಬಾಲಕೃಷ್ಣ ಹಿರಿಂಜರವರು ಕಲ್ಕುಡ ದೈವಸ್ಥಾನದ ಆಡಳಿತ ಮಂಡಳಿ ಸಮಿತಿಯವರಿಗೆ ವಿತರಿಸಿದರು.