ಹನಿ ಟ್ರ್ಯಾಪ್ ಮೂಲಕ ವ್ಯಕ್ತಿಯೊಬ್ಬರನ್ನು ಬಲೆಗೆ ಬೀಳಿಸಿ, ಹಲ್ಲೆ ನಡೆಸಿ ಹಣ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿದಂತೆ ಆರು ಆರೋಪಿಗಳನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ್ದ ₹18 ಲಕ್ಷ ಮೌಲ್ಯದ ಕಾರನ್ನೂ ವಶಪಡಿಸಿಕೊಳ್ಳಲಾಗಿದೆ.
'ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಯಾವಾಗ' ಎಂಬ ಹಿರಿಯ ಪತ್ರಕರ್ತೆ ರಾಧಾ ಹಿರೇಗೌಡರ್ ಪ್ರಶ್ನೆಗೆ 'ನಿಮ್ಮ ಹೆರಿಗೆ ಆದ್ಮೇಲೆ' ಎಂಬ ಉಡಾಫೆ ಉತ್ತರ ನೀಡಿರುವ ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಅವರ ವರ್ತನೆ ಕಾಂಗ್ರೆಸ್ ಪಕ್ಷದ ಕೀಳು ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಕ್ಕುಂದೂರು ಗ್ರಾಮದ ಜೋಡುರಸ್ತೆಯ ಶ್ರೀ ಗಣೇಶ ಮಂಟಪದಲ್ಲಿ ಐದು ದಿನಗಳ ಕಾಲ ನಡೆದ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಾರಂಭದ ಸಮಾರೋಪ ಸಮಾರಂಭ ಕಾರ್ಯಕ್ರಮ ಮತ್ತು ಗಣಪತಿ ವಿಗ್ರಹದ ವಿಸರ್ಜನಾ ಮೆರವಣಿಗೆಯು ಅತ್ಯಂತ ವಿಜೃಂಭಣೆಯಿಂದ ದಿನಾಂಕ 31-8-2025 ರಂದು ನಡೆಯಿತು.
ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಡೆದ ಉಡುಪಿ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟದಲ್ಲಿ, ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಮೋಘ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.