ಪ್ರಸ್ತುತ ಸ್ಥಗಿತಗೊಂಡಿರುವ ನರ್ಮ್ ಬಸ್ ಗಳನ್ನು ಪುನರಾರಂಭಿಸುವ ಜೊತೆಗೆ ಹಳೆಯ ಬಸ್ ಗಳನ್ನು ಬದಲಾಯಿಸಿ, ಹೆಚ್ಚುವರಿ ಬಸ್ ಗಳ ಸೇವೆಯನ್ನು ಒದಗಿಸುವಂತೆ ಬಿಜೆಪಿ ಉಡುಪಿ ನಗರ ಯುವ ಮೋರ್ಚಾ ವತಿಯಿಂದ ಮೋರ್ಚಾ ಅಧ್ಯಕ್ಷ ಶ್ರೀವತ್ಸ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಮುದ್ರಾಡಿ ಗ್ರಾಮದ ಅತೀ ಪುರಾತನ ಬಲ್ಲಾಡಿ ಶ್ರೀ ಅರ್ಧನಾರೀಶ್ವರ ಅಬ್ಬಗ ದಾರಗ ದೇವಸ್ಥಾನ ಮತ್ತು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜೀರ್ಣೋದ್ದಾರ ಕುರಿತು ಪೂರ್ವಭಾವಿ ಸಭೆಯು ಮುದ್ರಾಡಿ ಸಮುದಾಯ ಭವನದಲ್ಲಿ ಜೂ. 22 ರಂದು ನಡೆಯಿತು.
ಜೂನ್ ತಿಂಗಳ ಮೌಲ್ಯಸುಧಾ ಮಾಲಿಕೆ-37 ತಾರೀಕು 28, ಶನಿವಾರದಂದು ಸಂಜೆ 6 ಗಂಟೆಗೆ ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ರಾಮಕೃಷ್ಣ ವಿವೇಕಾನಂದ ಆಶ್ರಮ, ರಾಮಕೃಷ್ಣ ನಗರ, ತುಮಕೂರಿನ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮಿಜಿಯವರು ಆಗಮಿಸಲಿದ್ದಾರೆ
ಹಿರಿಯಡ್ಕದ ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘ (ರಿ) ಕೊಂಡಾಡಿ, ಭಜನೆಕಟ್ಟೆಯಲ್ಲಿ ಹಿಂದುಸ್ಥಾನಿ ಸಂಗೀತ ಶಾಲೆಯ ಉದ್ಘಾಟನಾ ಕಾರ್ಯಕ್ರಮವು ಜೂನ್ 29, 2025ರಂದು ಬೆಳಿಗ್ಗೆ 9:30ಕ್ಕೆ ನಡೆಯಲಿದೆ.
ಕಾರ್ಕಳದ ಬೈಲೂರು ಮಸೀದಿಯ ಸಮೀಪ ಇಂದು ಮಧ್ಯಾಹ್ನ ಆರ್ಭಟಿಸಿದ ಗಾಳಿ ಮಳೆಗೆ ಸಡಿಲವಾದ ಮರವೊಂದು ರಸ್ತೆಗೆ ಅಡ್ಡಲಾಗಿ ಧರೆಗುರುಳಿದ್ದು, ವಿದ್ಯುತ್ ಕಂಬವೊಂದು ಮನೆಯ ಮೇಲೆ ಬಿದ್ದ ಘಟನೆ ನಡೆದಿದೆ.