ಭಾರತೀಯ ಜನಸಂಘದ ಸಂಸ್ಥಾಪಕ ಹಾಗೂ ಪ್ರಥಮ ಅಧ್ಯಕ್ಷ ಡಾ! ಶಾಮಪ್ರಸಾದ್ ಮುಖರ್ಜಿ 'ಬಲಿದಾನ ದಿವಸ್' ಪ್ರಯುಕ್ತ ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್ ನೇತೃತ್ವದಲ್ಲಿ ನಗರ ಕಾರ್ಯಾಲಯದಲ್ಲಿ ಡಾ! ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.
ಕುತ್ಯಾರು ನವೀನ್ ಶೆಟ್ಟಿ ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಭಾರತೀಯ ಜನಸಂಘದ ಸಂಸ್ಥಾಪಕ ಡಾ! ಶಾಮಪ್ರಸಾದ್ ಮುಖರ್ಜಿ 'ಬಲಿದಾನ ದಿವಸ್' ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಡಾ! ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಿ.ಸಿ. ಟ್ರಸ್ಟ್ ಉಡುಪಿ ತಾಲೂಕಿನ ಹಿರಿಯಡ್ಕ ವಲಯ ಮತ್ತು ಪಂಚನಬೆಟ್ಟು ಖಾಸಗಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥರು ಮತ್ತು ಕಿರಿಯ ಶ್ರೀಪಾದರ ಆದೇಶದ ಮೇರೆಗೆ ಶ್ರೀ ಪುತ್ತಿಗೆ ಮಠ, ಹಿರಿಯಡ್ಕದಲ್ಲಿ ಗ್ರಾಮಸ್ಥರೆಲ್ಲಾ ಸೇರಿ ಪೂರ್ವಭಾವೀ ಸಭೆಯನ್ನು ನಡೆಸಲಾಯಿತು.