ಅಹಮದಾಬಾದ್ ವಿಮಾನ ದುರಂತದಲ್ಲಿ ಸಾವೀಗೀಡಾದವರ ಆತ್ಮಕ್ಕೆ ಶಾಂತಿ ದೊರಕಲಿ, ಮೃತರ ಕುಟುಂಬ ವರ್ಗಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಕಾರ್ಕಳ ಇದರ ಆಶ್ರಯದಲ್ಲಿ ಪಕ್ಷ ಸಂಘಟನೆಯ ಪ್ರಯುಕ್ತ ವಿವಿಧ ಘಟಕಗಳ ಅಧ್ಯಕ್ಷರು, ಗ್ರಾಮೀಣ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ವಲಯ ಉಸ್ತುವಾರಿಗಳ ಸಭೆಯು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದರಾವ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಸಂದರ್ಭದಲ್ಲಿ, ಹವಾಮಾನ ಇಲಾಖೆಯು ಕೆಂಪು ಎಚ್ಚರಿಕೆ (Red Alert) ಜಾರಿ ಮಾಡಿದೆ. ಇದರ ನಂತರ, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರು ನಾಳೆ (13.06.2025)...
ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ದೆಂದೂರ್ ಕಟ್ಟೆ ಬಳಿ ಮಾನಸಿಕ ಖಿನ್ನತೆಗೆ ಒಳಗಾದ ಮಹಿಳೆಯೊಬ್ಬರು ಧಾರಾಕಾರ ಮಳೆಯಲ್ಲಿ ನೆನೆಯುತ್ತಾ ರಸ್ತೆ ಬದಿಯಲ್ಲಿ ದೀರ್ಘ ಸಮಯ ಕುಳಿತಿದ್ದವರನ್ನು ಸ್ಥಳೀಯ ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿಯವರು ತಕ್ಷಣ ಸ್ಪಂದಿಸಿ ರಕ್ಷಣೆ ಮಾಡಿರುವ ಮಾನವೀಯ ಘಟನೆ ಬೆಳಕಿಗೆ ಬಂದಿದೆ.