ದಿನಾಂಕ 10-09-2025 ರ ಬುಧವಾರದಂದು ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರೆಡು ದಿನಗಳ ಕಾಲ ನಡೆಯಲಿರುವ ವಾಣಿಜ್ಯ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನವನ್ನು ರಾಜೇಶ್ವರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶ್ರೀ ದೇವಿಪ್ರಸಾದ್ ಶೆಟ್ಟಿ ಉದ್ಘಾಟಿಸಿದರು.
ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿತು.
ಕುಪ್ಮಾದ ರಾಜ್ಯಮಟ್ಟದ ದ್ವಿತೀಯ ಸಮಾವೇಶವು 2025ರ ಸೆಪ್ಟೆಂಬರ್ ತಿಂಗಳಲ್ಲಿ ದಿನಾಂಕ 12 ಮತ್ತು 13ರಂದು 'ಎಸ್. ಎಸ್. ಮಲ್ಲಿಕಾರ್ಜುನ ಕಲ್ಚರಲ್ ಸೆಂಟರ್, ಬಿಐಇಟಿ, ದಾವಣಗೆರೆ, ಇಲ್ಲಿ ನಡೆಯಲಿದೆ.
ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.