ಶ್ರೀ ಶ್ರೀ ಶ್ರೀ ಈಶ ವಿಠಲದಾಸ ಸ್ವಾಮೀಜಿಯವರು ದಿನಾಂಕ:18/06/2025 ರಂದು ಕೆ.ಎಂ.ಇ.ಎಸ್ ಶಿಕ್ಷಣ ಸಂಸ್ಥೆಯ, ಪೋಷಕ-ಶಿಕ್ಷಕ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯಾದ್ಯಂತ ಸತತವಾಗಿ ಭಾರೀ ಮಳೆ ಸುರಿಯುತ್ತಿರುವ ಕಾರಣದಿಂದಾಗಿ ನಾಳೆ (16.6.2025) ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ (1ರಿಂದ 10ನೇ ತರಗತಿ ವರೆಗೆ) ರಜೆ ಘೋಷಿಸಲಾಗಿದೆ
ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ
04 ರಂದು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ
ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಜ್ಞಾನಸುಧಾ ಎಂಟ್ರೆನ್ಸ್ ಅಕಾಡೆಮಿಯ ಪರಿಶ್ರಮವನ್ನು ಶ್ಲಾಘಸಿದ್ದಾರೆ.