ಕಲಾ ಶಿಕ್ಷಕ ಶ್ರೀಯುತ ಮೋಹನ್ ಕಡಬ ಅವರಿಗೆ ಉಡುಪಿ ರಾಜಾಂಗಣದಲ್ಲಿ ರಾಗವಾಹಿನಿ (ರಿ) ಉಡುಪಿ, ಕಲಾನಿಧಿ (ರಿ).. ಸಾಂಸ್ಕೃತಿಕ ಕಲಾಪ್ರಕಾರಗಳ ಸಂಸ್ಥೆ, ಉಡುಪಿ ಮತ್ತು ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀ ಕೃಷ್ಣ ಮಠ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ2025 ಆಗಸ್ಟ್ 2, ರಂದು "ಚಿತ್ರಕಲಾ ಚೇತನ" ಎಂಬ ಬಿರುದಿನೊಂದಿಗೆ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ನಿವೃತ್ತ ಪ್ರಾಚಾರ್ಯ ನರೇಂದ್ರ ಬಡಶೇಷಿಯವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಚ್ ಕೆ ಇ ಎಸ್ ಬಾಲಕೀಯರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ಹೊಸ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಹಾಗೂ ವಿದ್ಯಾರ್ಥಿಗಳ ಪುನಶ್ಚೇತನ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ಆಗಸ್ಟ್ 3 ರಂದು ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಕುಬುಡೊ ಬುಡೋಕಾನ್ ಕರಾಟೆ ಡೊ ಅಸೋಸಿಯೇಷನ್ಸ್‌ನ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.
ಎನ್.ಎಸ್.ಎಸ್ ನ ಧ್ಯೇಯೋದ್ದೇಶ ವ್ಯಕ್ತಿತ್ವ ವಿಕಸನ. ಇದರ ಸ್ವಯಂ ಸೇವಕ ವಿದ್ಯಾರ್ಥಿಗಳು ಉತ್ತಮ ಕೇಳುಗರಾದರೆ ಶ್ರೇಷ್ಠ ವ್ಯಕ್ತಿಗಳಾಗಿ ಹೊರಹೊಮ್ಮಲು ಸಾಧ್ಯ ಎಂದು ನಿವೃತ್ತ ಪ್ರಾಂಶುಪಾಲರಾದ ಶ್ರೀವರ್ಮ ಅಜ್ರಿ ಎಂ ಮಾತನಾಡಿದರು.