ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕಾಮರ್ಸ್ ಫೆಸ್ಟ್ ಪ್ರಯುಕ್ತ ನಡೆಸಲ್ಪಟ್ಟ ಎಕನಾವಾಂಝ ಇಂಟರ್ ಕಾಲೇಜುಗಳ ವಿವಿಧ ಸ್ಪರ್ಧಾವಳಿಗಳಲ್ಲಿ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಪಡೆಯುವುದರ ಮೂಲಕ ಚಾಂಪಿಯನ್ ಶಿಪ್ ನೊಂದಿಗೆ, ನಗದು ಪುರಸ್ಕಾರವನ್ನು ಪಡೆದುಕೊಂಡು ಸಂಸ್ಥೆಗೆ ಕೀರ್ತಿ ತಂದಿರುತ್ತಾರೆ
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆತ್ರಾಡಿಯಲ್ಲಿ "ದ್ವಿ ಭಾಷಾ ಕಲಿಕಾ ಆಂಗ್ಲ ಮಾಧ್ಯಮ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಪರೀಕ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಮೊಕ್ತೇಸರರಾದ ಶ್ರೀ ಉದಯರಾಜ್ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ಜರಗಿತು.
"ಮಾದಕ ದ್ರವ್ಯ ಪೆಡ್ಲರ್‌ಗಳು ವಿದ್ಯಾರ್ಥಿಗಳನ್ನು ಪ್ರಮುಖವಾಗಿ ತಮ್ಮ ಜಾಲಕ್ಕೆ ಸೆಳೆಯಲು ಪ್ರಯತ್ನಿಸುತ್ತಾರೆ. ಆದರೆ ನೀವು ಅದಕ್ಕೆ ಬಲಿಯಾಗದೆ, ನಿಮ್ಮ ಭವಿಷ್ಯ ನಿರ್ಮಾಣದ ಕಡೆಗೆ ಪ್ರಯತ್ನಶೀಲರಾಗಬೇಕು" ಎಂದು ಬಂದರು ಉತ್ತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಅಜ್ಮತ್ ಅಲಿ ಹೇಳಿದರು.
ಬ್ಯಾಂಕ್ ಆಫ್ ಬರೋಡಾದ ಸಾಣೂರು ಶಾಖೆಯ ವತಿಯಿಂದ ಕೊಳಕೆ ಇರ್ವತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಲಿಕಾ ಸಾಮಗ್ರಿಗಳ ವಿತರಣಾ ಕಾರ್ಯಕ್ರಮ ನಡೆಯಿತು. ಶತಮಾನೋತ್ಸವ ಮುಂಬೈ ಸಮಿತಿಯ ಗೌರವಾಧ್ಯಕ್ಷರಾದ ರಮೇಶ್ ಶೆಟ್ಟಿ ಗುರಂತಿಬೆಟ್ಟು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಅರ್ಥಶಾಸ್ತ್ರ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವೇದಿಕೆ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಅರ್ಥಶಾಸ್ತ್ರ ವಿಷಯದ ಪುನಶ್ಚೇತನ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ 28 ಜುಲೈ 2025 ರಂದು ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ಜರುಗಿತು.