ಇರುವತ್ತೂರು ಕೊಳಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆನಂದ್ ಸರ್ ಅಭಿಮಾನಿ ಶಿಷ್ಯರ ಬಳಗ, ಕುಂದಾಪುರ ವತಿಯಿಂದ ಸುಮಾರು ₹20,000 ಮೌಲ್ಯದ ಕೊಡೆಗಳು ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.
ವಿಶ್ವದ ಅತಿ ಪ್ರತಿಷ್ಠಿತ ಕಂಪನಿಗಳಲ್ಲಿ ಒಂದಾದ ರೋಲ್ಸ್-ರಾಯ್ಸ್‌ನಲ್ಲಿ ಉದ್ಯೋಗ ಪಡೆದ ಕರ್ನಾಟಕದ ಕಿರಿಯ ವಯಸ್ಸಿನ ಮೊದಲ ಯುವತಿ ಎಂಬ ಹೆಗ್ಗಳಿಕೆಗೆ ಮಂಗಳೂರಿನ ರಿತುಪರ್ಣ ಭಾಜನರಾಗಿದ್ದಾರೆ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳಕೆ ಇರ್ವತ್ತೂರಿನಲ್ಲಿ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲೆಯನ್ನು ಪರಿಚಯಿಸುವ ಉದ್ದೇಶದಿಂದ ಯಕ್ಷ ಕಲಾರಂಗ (ರಿ) ಕಾರ್ಕಳ ಮತ್ತು ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ) ಮಂಗಳೂರು ಇವರ ವತಿಯಿಂದ ಯಕ್ಷಗಾನ ತರಬೇತಿ ಶಿಬಿರಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು.
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹತ್ತನೇ ತರಗತಿ ಮತ್ತು ಪಿಯುಸಿ ಪಾಸಾದ 90 ಶೇಕಡಾಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಕಾರ್ಯಕ್ರಮವು ಟ್ರಸ್ಟಿನ ಅಧ್ಯಕ್ಷ ಅವಿನಾಶ್ ವಿ ಶೆಟ್ಟಿಯವರ ನೇತೃತ್ವದಲ್ಲಿ ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ನಡೆಯಿತು.