ಉಡುಪಿ ಜಿಲ್ಲೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್), ಹಿರಿಯಡ್ಕದಲ್ಲಿ ಸೆಪ್ಟೆಂಬರ್ 9, 2025 ರ ಮಂಗಳವಾರದಂದು ಶಿಕ್ಷಕರ ದಿನಾಚರಣೆ - 2025 ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಪೂರ್ವಾಹ್ನ 10 ಗಂಟೆಗೆ ಪ್ರಾರಂಭವಾಗಲಿದೆ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಚಿಕ್ಕಮಗಳೂರು ಇಲ್ಲಿಗೆ ಸಹಾಯಕ ಪ್ರಾಧ್ಯಾಪಕಿಯಾಗಿ ಸ್ಥಳ ನಿಯುಕ್ತಿ ಹೊಂದಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಶ್ರೀಮತಿ ಪೂರ್ಣಿಮಾ ಕೆ ಇವರನ್ನು ಈ ದಿನ ಆತ್ಮೀಯವಾಗಿ ಸನ್ಮಾನಿಸಲಾಯಿತು.
04-09-2025 ರಂದು ಡಾ.ಎನ್.ಎಸ್ .ಎ.ಎಮ್ ಪ್ರಥಮದರ್ಜೆ ಕಾಲೇಜು, ನಿಟ್ಟೆಯ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಐಕ್ಯೂಎಸಿ ಕೋಶವು ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕರ ಸಂಘದ ಆಶ್ರಯದಲ್ಲಿ ರಾಣಿ ಅಬ್ಬಕ್ಕ @500 ಪ್ರೇರಣದಾಯಿ ಉಪನ್ಯಾಸ ಮಾಲಿಕೆಯ 41 ನೇ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಿತ್ತು.