ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ವತಿಯಿಂದ ನಡೆದ ಉಡುಪಿ ಜಿಲ್ಲಾಮಟ್ಟದ ಕರಾಟೆ ಪಂದ್ಯಾಟದಲ್ಲಿ, ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಅಮೋಘ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಕಾರ್ಕಳದ ಪ್ರತಿಭಾವಂತ ಭರತನಾಟ್ಯ ಕಲಾವಿದೆ ಅದಿತ್ರಿಯ ಸಿಂಧು ಅವರು, ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲಯ ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.
ಮುದ್ರಾಡಿಯ ಹಿರಿಯ ವೈದ್ಯರು ಮತ್ತು ವಿದ್ಯಾಸಾಗರ ಎಜುಕೇಶನ್ ಟ್ರಸ್ಟಿನ ಖಜಾಂಚಿ ಡಾ. ಎಂ. ಎಸ್. ರಾವ್ ಅವರು ಆಗಸ್ಟ್ 29 ರಂದು ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ನಡೆದ ಕ್ರೀಡಾ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಿ ಮಾತನಾಡಿದರು.