ರಾಜ್ಯದಲ್ಲೇ ಪ್ರಥಮ ಬಾರಿಗೆ ತಾಲೂಕು ಮಟ್ಟದ ಕಾರ್ಕಳದಲ್ಲಿ KGTTI (ಕರ್ನಾಟಕ ಜರ್ಮನ್ ಟ್ರೈನಿಂಗ್ ಇನ್ಸ್ಟಿಟ್ಯೂಟ್) ಪ್ರಾರಂಭಿಸಬೇಕೆಂಬುದು ನನ್ನ ಕನಸಾಗಿತ್ತು. ಕಾರ್ಕಳ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ವಿದ್ಯಾರ್ಥಿಗಳಿಗೆ ಸ್ವ ಉದ್ಯಮ ನಡೆಸಲು ಕೌಶಲ್ಯ ಆಧಾರಿತ ತರಬೇತಿ ದೊರೆಯಬೇಕು
ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ (ರಿ), ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಉಡುಪಿ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್, ಹಿರಿಯಡ್ಕ (ಉಡುಪಿ ವಲಯ) ಇವುಗಳ ಸಂಯುಕ್ತ ಆಶ್ರಯದಲ್ಲಿ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ - 2025 ಎಂಬ ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮವು ಈ ತಿಂಗಳ 28ನೇ ತಾರೀಖು ಶನಿವಾರದಂದು ಬೆಳಿಗ್ಗೆ 10 ಗಂಟೆಗೆ ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲಿನಲ್ಲಿ ನಡೆಯಲಿದೆ.
ಭಾರತದ ವಿಜ್ಞಾನ ಕ್ಷೇತ್ರದಲ್ಲಿ ಅತ್ಯಂತ ಪ್ರತಿಷ್ಠಿತ ಪ್ರವೇಶ ಪರೀಕ್ಷೆಯಾದ IISER Aptitude Test (IAT-2025) ಫಲಿತಾಂಶವನ್ನು ಜೂನ್ 24, 2025 ರಂದು ಪ್ರಕಟಿಸಲಾಗಿದೆ. ಪ್ರತಿವರ್ಷದಂತೆ ಈ ಬಾರಿಯೂ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ವಿಜ್ಞಾನ ಕ್ಷೇತ್ರದ ಈ ಪರೀಕ್ಷಾ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದೆ.
ಜೂನ್ ತಿಂಗಳ ಮೌಲ್ಯಸುಧಾ ಮಾಲಿಕೆ-37 ತಾರೀಕು 28, ಶನಿವಾರದಂದು ಸಂಜೆ 6 ಗಂಟೆಗೆ ನಡೆಯಲಿದ್ದು, ಸಂಪನ್ಮೂಲ ವ್ಯಕ್ತಿಯಾಗಿ ರಾಮಕೃಷ್ಣ ವಿವೇಕಾನಂದ ಆಶ್ರಮ, ರಾಮಕೃಷ್ಣ ನಗರ, ತುಮಕೂರಿನ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮಿಜಿಯವರು ಆಗಮಿಸಲಿದ್ದಾರೆ
ಹಿರಿಯಡ್ಕದ ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘ (ರಿ) ಕೊಂಡಾಡಿ, ಭಜನೆಕಟ್ಟೆಯಲ್ಲಿ ಹಿಂದುಸ್ಥಾನಿ ಸಂಗೀತ ಶಾಲೆಯ ಉದ್ಘಾಟನಾ ಕಾರ್ಯಕ್ರಮವು ಜೂನ್ 29, 2025ರಂದು ಬೆಳಿಗ್ಗೆ 9:30ಕ್ಕೆ ನಡೆಯಲಿದೆ.