ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ ಸಿ ಬಿ ವಿಜಯೋತ್ಸವದಲ್ಲಿ ಅಪಾರ ಅಭಿಮಾನಿಗಳು ಭಾಗವಹಿಸಿದ ಪರಿಣಾಮ ಭೀಕರ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದ್ದು, 11 ಮಂದಿ ದುರಂತವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆ ದೇಶದಾದ್ಯಂತ ಆಘಾತ ಉಂಟುಮಾಡಿದ್ದು, ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಈ ಕುರಿತು ತೀವ್ರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ 18 ವರ್ಷಗಳ ಬಹುಕಾಲದ ನಿರೀಕ್ಷೆಗೆ ಕೊನೆ ಬಿದ್ದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಮೊದಲ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಚಾಂಪಿಯನ್ ಆಗುವ ಮೂಲಕ ಕೋಟ್ಯಾಂತರ ಅಭಿಮಾನಿಗಳ ಕನಸು ನನಸಾಗಿದೆ.
ಯುಎಇನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಕಾಂಟಿನೆಂಟಲ್ ಟೂರ್‌ನ ಭಾಗವಾಗಿರುವ ಅಥ್ಲೆಟಿಕ್ಸ್ ವುಮೆನ್ಸ್ ಗಾಲಾ ಕೂಟದಲ್ಲಿ ಕರ್ನಾಟಕದ ಕ್ರೀಡಾಪಟು ಕರಿಶ್ಮಾ ಸನಿಲ್ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.
ಮತ್ತು ಕಾಶ್ಮೀರದ ಪಹಲ್ಯಾಮ್ ಪ್ರದೇಶದಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ–ಪಾಕಿಸ್ತಾನ ನಡುವೆ ಉದ್ವಿಗ್ನತೆ ತೀವ್ರಗೊಂಡಿದ್ದು, ಇದರ ಪರಿಣಾಮವಾಗಿ ಬಿಸಿಸಿಐ ಉಳಿದ ಐಪಿಎಲ್ ಪಂದ್ಯಾವಳಿಯನ್ನು ಅಮಾನತುಗೊಳಿಸಿದೆ.