ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಮಹತ್ವದ ವಿಚಾರಣೆ ನಡೆಯುತ್ತಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಏಕಾಏಕಿ ಕೋರ್ಟ್ ಹಾಲ್‌ಗೆ ನುಗ್ಗಿ, ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ ಘಟನೆ ನಡೆದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ವರ್ಗಾಯಿಸುವಂತೆ ಜೈಲು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯ ಕುರಿತ ವಿಚಾರಣೆ ಬುಧವಾರ 64ನೇ ಸೆಷನ್ಸ್ ನ್ಯಾಯಾಲಯದಲ್ಲಿ ಮುಕ್ತಾಯಗೊಂಡಿದ್ದು, ನ್ಯಾಯಾಲಯ ತನ್ನ ಆದೇಶವನ್ನು ಸೆಪ್ಟೆಂಬರ್ 9 ಕ್ಕೆ ಕಾಯ್ದಿರಿಸಿದೆ.
'ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಯಾವಾಗ' ಎಂಬ ಹಿರಿಯ ಪತ್ರಕರ್ತೆ ರಾಧಾ ಹಿರೇಗೌಡರ್ ಪ್ರಶ್ನೆಗೆ 'ನಿಮ್ಮ ಹೆರಿಗೆ ಆದ್ಮೇಲೆ' ಎಂಬ ಉಡಾಫೆ ಉತ್ತರ ನೀಡಿರುವ ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಅವರ ವರ್ತನೆ ಕಾಂಗ್ರೆಸ್ ಪಕ್ಷದ ಕೀಳು ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.