ಗುಜರಾತ್ ಕ್ರಿಕೆಟ್ ಅಸೋಸಿಯೇಷನ್‌ಗೆ 'ಪಾಕಿಸ್ತಾನಿ ಜೆಕೆ' ಎಂಬ ನಾಮದಿಂದ ಇಮೇಲ್ ಬಂದಿದ್ದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆಯುಳ್ಳ ಸಂದೇಶ ಕಳುಹಿಸಲಾಗಿದೆ.
ಪಾಕಿಸ್ತಾನದ ಉಗ್ರರ ಶಿಬಿರಗಳ ಮೇಲೆ ಭಾರತೀಯ ಸೇನೆ ನಡೆಸಿದ ಕ್ಷಿಪಣಿ ದಾಳಿಯ ಬೆನ್ನಲ್ಲೆ , ದೇಶಾದ್ಯಂತ ಭದ್ರತಾ ಎಚ್ಚರಿಕೆಯನ್ನು ಹೆಚ್ಚಿಸಲಾಗಿದೆ. ಇದರ ಅಂಗವಾಗಿ ‘ಆಪರೇಷನ್ ಅಭ್ಯಾಸ್ ’ ಹೆಸರಿನಲ್ಲಿ ದೇಶದ ಪ್ರಮುಖ ನಗರಗಳಲ್ಲಿ ಮಾಕ್ ಡ್ರಿಲ್ (Mock Drill) ನಡೆಯಿತು
ಭಾರತೀಯರೆಲ್ಲರೂ ಪಕ್ಷಾತೀತವಾಗಿ, ಜಾತ್ಯಾತೀತವಾಗಿ, ಧರ್ಮಾತೀತವಾಗಿ ಸಂಭ್ರಮಿಸುವ ಅತ್ಯಂತ ಸಂತಸದ ಕ್ಷಣ ಇದಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು.
ಅಕ್ರಮ ಗಣಿಗಾರಿಕೆಯ ಹಿನ್ನೆಲೆಯಲ್ಲಿರುವ ಓಬಳಾಪುರಂ ಮೈನಿಂಗ್ ಕಂಪನಿ (OMC) ಪ್ರಕರಣದಲ್ಲಿ, ಮಾಜಿ ಸಚಿವ ಮತ್ತು ಗಂಗಾವತಿಯ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ನೀಡಿದೆ.
‘ಆಪರೇಷನ್ ಸಿಂಧೂರ್’ ಹಿನ್ನಲೆಯಲ್ಲಿ ಗಡಿಭಾಗದಲ್ಲಿ ಭದ್ರತಾ ಸನ್ನಾಹವನ್ನು ಹೆಚ್ಚಿಸಲಾಗಿದೆ. ಇದರ ಪರಿಣಾಮವಾಗಿ ಭಾರತದ ಉತ್ತರ ಭಾಗದ ಹಲವಾರು ವಿಮಾನ ನಿಲ್ದಾಣಗಳಲ್ಲಿನ ನಾಗರಿಕ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ.