ಉಡುಪಿ ಜಿಲ್ಲೆ 80 ಬಡಗಬೆಟ್ಟು ಗ್ರಾಮದ ದಶರಥ ನಗರದಲ್ಲಿರುವ ಡೌನ್ ಟೌನ್ ಲಾಡ್ಜ್‌ನಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಮಣಿಪಾಲ ಪೊಲೀಸರು ಎಪ್ರಿಲ್ 22ರಂದು ಮಧ್ಯಾಹ್ನ ಬಂಧಿಸಿದ್ದಾರೆ. ಈ ಸಂಬಂಧ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಾಶ್ಮೀರದ ಪಹಲ್ಗಾಮ್ ನ ಬೈಸರನ್ ಹುಲ್ಲುಗಾವಲಿನಲ್ಲಿ ಹಿಂದೂಗಳನ್ನು ಗುರಿಯಾಗಿಸಿ ದಾಳಿ ನಡೆಸಿರುವ ಉಗ್ರರು ಕೇವಲ ಧರ್ಮ ಕೇಳಿ ರಕ್ತದೋಕುಳಿ ಹರಿಸಿರುವುದು ಭಯೋತ್ಪಾದನೆ ಧರ್ಮಾಧಾರಿತ ಎಂಬುದನ್ನು ಜಗಜ್ಜಾಹೀರುಗೊಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ಭೀಕರ ಉಗ್ರದಾಳಿಯಲ್ಲಿ ಬೆಂಗಳೂರಿನ ಜೆ.ಪಿ. ಪಾರ್ಕ್ ನಿವಾಸಿ ಹಾಗೂ ಹಾವೇರಿ ಜಿಲ್ಲೆ ರಾಣೆಬೆನ್ನೂರಿನ ಮೂಲದ ಭರತ್ ಭೂಷಣ್ (41) ಮತ್ತು ಶಿವಮೊಗ್ಗದ ಮಂಜುನಾಥ್ ದುರ್ಮರಣಕ್ಕೀಡಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದ ಬೈಸರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ದೇಶದಾದ್ಯಂತ ಆಕ್ರೋಶವನ್ನು ಉಂಟುಮಾಡಿದ್ದು, ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಈ ಕುರಿತು ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.