ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಕುರಿತಾಗಿ ನ್ಯಾಯಾಲಯದ ತಡೆಯಾಜ್ಞೆಯನ್ನು ಉಲ್ಲಂಘಿಸಿ ಮತ್ತೊಂದು ವಿವಾದಿತ ವಿಡಿಯೋ ಪ್ರಕಟಿಸಿದ ಆರೋಪದ ಮೇರೆಗೆ ‘ದೂತ’ ಯೂಟ್ಯೂಬ್ ಚಾನೆಲ್‌ನ ಎಂಡಿ ಸಮೀರ್ ವಿರುದ್ಧ ₹10 ಕೋಟಿ ಮಾನನಷ್ಟದ ದಾವೆ ದಾಖಲಿಸಲಾಗಿದೆ.
ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರು ನಿಪ್ಪಾಣಿಗೆ ಆಗಮಿಸಿ ನೂರು ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ, ‘ಭೀಮ ಹೆಜ್ಜೆ ಶತಮಾನ ಸಂಭ್ರಮ’ ಬೈಕ್ ರ್ಯಾಲಿಗೆ ಇಂದು ಬೆಂಗಳೂರಿನಲ್ಲಿ ವಿಧಾನಸೌಧದ ಮುಂಭಾಗದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದರು.
ತಮಿಳುನಾಡಿನ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಕೆ. ಅಣ್ಣಾಮಲೈ ಅವರು ಸ್ವಯಂ ಪ್ರೇರಿತವಾಗಿ ಹುದ್ದೆಯಿಂದ ಕೆಳಗಿಳಿದ ಹಿನ್ನೆಲೆಯಲ್ಲಿ, ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವರನ್ನು ಹೊಸ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಕುಂದಾಪುರದಲ್ಲಿ ಕಾಲೇಜು ವಿದ್ಯಾರ್ಥಿಗಳ ಮೇಲಿನ ನೈತಿಕ ಪೊಲೀಸ್‌ಗಿರಿ ಪ್ರಕರಣದಲ್ಲಿ ತೀವ್ರ ದೌರ್ಜನ್ಯ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ. ಸ್ಪಷ್ಟಪಡಿಸಿದ್ದಾರೆ.