ಬಿಜೆಪಿಯಿಂದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ (ಯತ್ನಾಳ್) ಅವರನ್ನು ಉಚ್ಛಾಟನೆ ಮಾಡಿದ್ದಕ್ಕೆ ಪ್ರತಿಕ್ರಿಯೆಯಾಗಿ, ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಪಕ್ಷದಲ್ಲಿರುವ ಎಲ್ಲಾ ಲಿಂಗಾಯತ ಶಾಸಕರನ್ನು ಬಿಜೆಪಿ ಬಿಟ್ಟು ಹೊರಡಲು ಕರೆ ನೀಡಿದ್ದಾರೆ.
2019ರಲ್ಲಿ ಭಾರತದಿಂದ ಪಲಾಯನ ಮಾಡಿದ ಸ್ವಘೋಷಿತ ದೇವಮಾನವ ನಿತ್ಯಾನಂದ ಸ್ವಾಮಿ, ದಕ್ಷಿಣ ಅಮೆರಿಕದ ಬೊಲೀವಿಯಾದ ಬುಡಕಟ್ಟು ಜನರನ್ನು ವಂಚಿಸಿ ಭೂಮಿ ಸ್ವಾಧೀನಕ್ಕೆ ಮುಂದಾದ ಆರೋಪ ಕೇಳಿಬಂದಿದೆ.
ರಾಜ್ಯ ಬಿಜೆಪಿ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸುವ ಬೆಳವಣಿಗೆಯಲ್ಲಿ, ಬಿಜೆಪಿ ಹೈಕಮಾಂಡ್ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿದೆ.
"ನಾನು ಸಂವಿಧಾನ ಬದಲಾಯಿಸುವುದಾಗಿ ಹೇಳಿಲ್ಲ. ಹಾಗೆ ಹೇಳಿದ್ದರೆ ತಕ್ಷಣ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ" ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.