
ನಟಿ ರಾಗಿಣಿ ದ್ವಿವೇದಿ ಡ್ರಗ್ಸ್ ಕೇಸ್‌ನಲ್ಲಿ ಹೆಸರು ಕೇಳಿ ಬಂದಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ನಟಿಯ ವಿರುದ್ಧ ಯಾವುದೇ ಸಾಕ್ಷಿ ಸಿಗದ ಕಾರಣ ಕೇಸ್ ಖುಲಾಸೆ ಮಾಡಿ ಹೈಕೋರ್ಟ್ ಆದೇಶ ನೀಡಿದ್ದು, ರಾಗಿಣಿ ರಿಲೀಫ್ ಆಗಿದ್ದಾರೆ.
ನಟಿ ರಾಗಿಣಿ ಮೇಲೆ ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿರುವ ಆರೋಪವಿತ್ತು. ಪಾರ್ಟಿ ಆಯೋಜನೆ ಮಾಡಿ ಡ್ರಗ್ಸ್ ಬಳಕೆಗೆ ಅವರು ಅವಕಾಶ ಮಾಡಿಕೊಟ್ಟಿದ್ದರು ಎನ್ನಲಾಗಿತ್ತು. ಈ ವಿಚಾರಕ್ಕೆ ಸಂಬಂಧ ಪಟ್ಟಂತೆ
ಎನ್ ಡಿ ಪಿ ಎಸ್ ಆಕ್ಟ್ ಅಡಿಯಲ್ಲಿ ಅವರ ವಿರುದ್ಧ ಕೇಸ್ ದಾಖಲು ಮಾಡಲಾಗಿತ್ತು. ಆದರೆ ಈ ಕುರಿತು ಯಾವುದೇ ಸಾಕ್ಷ್ಯಾಧಾರ ದೊರಕಿಲ್ಲ ಎಂದು ವರದಿಯಾಗಿದೆ.
ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡ ರವರ ನೇತೃತ್ವದ ಹೈಕೋರ್ಟ್ ಏಕಸದಸ್ಯ ಪೀಠ ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದೆ.