spot_img

ತೆರೆಗೆ ಬರಲು ಸಜ್ಜಾಗಿದೆ ಕರಾವಳಿಯ ಮತ್ತೊಂದು ಸಿನೆಮಾ “ಲೈಟ್ ಹೌಸ್”

Date:

spot_img

ಚಿತ್ರದ ಹೆಸರು: ಲೈಟ್ ಹೌಸ್

ಭಾಷೆ : ಕನ್ನಡ

ಅಸ್ತ್ರ ಪ್ರೊಡಕ್ಷನ್ಸ್ ಹಾಗೂ ಅಮ್ಚೆ ಕ್ರಿಯೇಶನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬಂದಿರುವ “ಲೈಟ್ ಹೌಸ್” ಕನ್ನಡ ಚಲನಚಿತ್ರ ಇದೇ ಮೇ 16 ರಂದು ತೆರೆಗೆ ಬರಲು ಸಜ್ಜಾಗಿದೆ. ಶ್ರೀ ದತ್ತಾತ್ರೆಯ ಪಾಟ್ಕರ್ ಬಂಟಕಲ್ಲು ಇವರ ನಿರ್ಮಾಣದಲ್ಲಿ, ಸಂದೀಪ್ ಕಾಮತ್ ಅಜೆಕಾರು ಇವರ ನಿರ್ದೇಶನದಲ್ಲಿ ಸಿನೆಮಾ ಮೂಡಿಬಂದಿದ್ದು, ಕರಾವಳಿ ಭಾಗದ ಕಲೆ-ಸಂಸ್ಕೃತಿ-ಆಚಾರ-ವಿಚಾರಗಳನ್ನು ಬಹಳ ಸುಂದರವಾಗಿ ಸಿನೆಮಾದಲ್ಲಿ ತೋಸಿಸಲಾಗಿದೆ. ಚಿತ್ರದ ಬಹುತೇಕ ಎಲ್ಲಾ ಚಿತ್ರೀಕರಣವನ್ನು ಉಡುಪಿಯಲ್ಲಿ ನಡೆಸಲಾಗಿದ್ದು, ಕರಾವಳಿಯ ಸೌಂದರ್ಯವನ್ನು ಸಿನೆಮಾದಲ್ಲಿ ಸೆರೆಹಿಡಿಯಲಾಗಿದೆ. “ಲೈಟ್ ಹೌಸ್” ಸಂಪೂರ್ಣ ಸಾಂಸಾರಿಕ ಚಿತ್ರವಾಗಿದ್ದು, ಇಡೀ ಸಂಸಾರ ಮಕ್ಕಳ ಜೊತೆ ಕೂತು ನೋಡುವ ಸಿನೆಮಾ ಇದಾಗಿದ್ದು, ಪ್ರಸ್ತುತ ಕನ್ನಡ ಮಾದ್ಯಮ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳು, ನೇತ್ರದಾನದ ಮಹತ್ವ ಹಾಗೂ ಕರಾವಳಿಯ ಕಲೆ-ಸಂಸ್ಕೃತಿಯನ್ನು ಸಮಾಜಕ್ಕೆ ತೋರಿಸುವ ಕಥೆ ಈ ಚಿತ್ರದಲ್ಲಿದೆ.

ಹೆಸರಾಂತ ಕಲಾವಿದರಾದ ಶೋಭರಾಜ್ ಪಾವೂರು, ಮಾನಸಿ ಸುಧೀರ್, ಪ್ರಕಾಶ್ತೂಮಿನಾಡು, ದೀಪಕ್ ರೈ ಪಾಣಾಜೆ, ಪೃಥ್ವಿ ಅಂಬರ್, ರಾಹುಲ್ ಅಮೀನ್, ಶೈಲಶ್ರೀ ಮುಲ್ಕಿ, ಶೀತಲ್‌ ನಾಯಕ್, ಅಚಲ್ ಜಿ ಬಂಗೇರ, ಅಪೂರ್ವ ಮಾಳ, ಚಂದ್ರಕಲಾ ರಾವ್, ತಿಮ್ಮಪ್ಪ ಕುಲಾಲ್‌, ನಮಿತಾ ಕಿರಣ್ ಮುಂತಾದವರು ಚಿತ್ರದ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ.

ಚಿತ್ರದಲ್ಲಿ ಒಟ್ಟು 4 ಹಾಡುಗಳಿದ್ದು ರವೀಂದ್ರ ನಾಯಕ್ ಸಣ್ಣಕ್ಕಿಬೆಟ್ಟು ಹಾಗೂ ಕ್ಲಿಂಗ್ ಜಾನ್ಸನ್ಇವರ ಸಾಹಿತ್ಯಕ್ಕೆ ಹೆಸರಾಂತ ಗಾಯಕರಾದ ವಿಜಯ್ ಪ್ರಕಾಶ್, ವಾಸುಕಿ ವೈಭವ್, ಪೃಥ್ವಿ ಭಟ್, ದಿಯಾ ಹೆಗ್ಡೆ ಚಿತ್ರದ ಹಾಡುಗಳಿಗೆ ಧ್ವನಿ ನೀಡಿರುತ್ತಾರೆ. ಚಿತ್ರದ ಛಾಯಗ್ರಹಣ ಹಾಗೂ ಸಂಕಲನದ ಜವಬ್ದಾರಿಯನ್ನು ಪ್ರಜ್ವಲ್ ಸುವರ್ಣ ವಹಿಸಿಕೊಂಡಿದ್ದು, ಚಿತ್ರಕ್ಕೆ ಸಂಗೀತವನ್ನು ಕಾರ್ತಿಕ್ ಮುಲ್ಕಿ ನೀಡಿರುತ್ತಾರೆ. ಉಡುಪಿ ನಮ್ಮ ಊರು ಹಾಡಿಗೆ ಗಿರಿಧರ್ ದಿವಾನ್ ಸಂಗೀತವನ್ನು ನೀಡಿರುತ್ತಾರೆ.

ಮೇ 16 ರಂದು “ಲೈಟ್ ಹೌಸ್” ಚಲನಚಿತ್ರ ರಾಜ್ಯದ ಬಹುತೇಕ ಕಡೆಗಳಲ್ಲಿ ತೆರೆಕಾಣಲಿದ್ದು ಚಿತ್ರದಲ್ಲಿ ಸಮಾಜದ ಜನತೆಗೆ ಹಾಗೂ ಮಕ್ಕಳಿಗೆ ಅನೇಕ ಸಂದೇಶಗಳು ಇದ್ದು, ಪ್ರತೀ ಒಬ್ಬ ಪೋಷಕರು ತಮ್ಮ ಮಕ್ಕಳೊಂದಿಗೆ ಕೂತು ಸಿನೆಮಾವನ್ನು ನೋಡಬಹುದಾಗಿದೆ ಎಂದು ಚಿತ್ರದ ನಿರ್ದೇಶಕ ಸಂದೀಪ್ ಕಾಮತ್ ಅಜೆಕಾರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಚಿತ್ರನಟಿ ಶೈಲಶ್ರೀ ಮುಲ್ಕಿ, ಯತೀಶ್ ಸುವರ್ಣ , ಮಾರ್ಗದರ್ಶಕರಾದ ಶ್ರೀ ಪುಂಡಲೀಕ ಮರಾಟೆ ಬಂಟಕಲ್ಲು, ಶ್ರೀ ವಿವೇಕ್ ಪಾಟ್ಕರ್ ಬಂಟಕಲ್ಲು, ನಿರ್ಮಾಪಕರಾದ ಶ್ರೀ ದತ್ತಾತ್ರೇಯ ಪಾಟ್ಕರ್ ಬಂಟಕಲ್ಲು ಉಪಸ್ಥಿತರಿರುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಇರುವತ್ತೂರು ಕೊಳಕೆ ಶಾಲಾ ವಿದ್ಯಾರ್ಥಿಗಳಿಗೆ ಆನಂದ್ ಸರ್ ಅಭಿಮಾನಿ ಶಿಷ್ಯರ ಬಳಗದಿಂದ ಕೊಡೆ, ಕಲಿಕಾ ಸಾಮಗ್ರಿ ವಿತರಣೆ

ಇರುವತ್ತೂರು ಕೊಳಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಆನಂದ್ ಸರ್ ಅಭಿಮಾನಿ ಶಿಷ್ಯರ ಬಳಗ, ಕುಂದಾಪುರ ವತಿಯಿಂದ ಸುಮಾರು ₹20,000 ಮೌಲ್ಯದ ಕೊಡೆಗಳು ಮತ್ತು ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು : ಸಂಧ್ಯಾ ರಮೇಶ್

ಪರಶುರಾಮ ಮೂರ್ತಿ ಬಗ್ಗೆ ಅಪಪ್ರಚಾರಗೈದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ಮತ್ತು ಅವರ ತಂಡ ಜಿಲ್ಲೆಯ ಜನತೆಯ ಕ್ಷಮೆ ಯಾಚಿಸಬೇಕು ಎಂದು ಸಂಧ್ಯಾ ರಮೇಶ್ ತಿಳಿಸಿದ್ದಾರೆ.

“ಬಿಜೆಪಿಗೆ ಧೈರ್ಯವಿದ್ದರೆ ದಲಿತರನ್ನು ಪ್ರಧಾನಿ ಮಾಡಿ”: ವಿಜಯೇಂದ್ರಗೆ ಸಿಎಂ ಸಿದ್ದರಾಮಯ್ಯ ಸವಾಲು!

ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವಂತೆ ಹೇಳಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು ನೀಡಿದ್ದಾರೆ.

ಫೋನ್ ಪಾಸ್‌ವರ್ಡ್ ನೀಡುವಂತೆ ಪತ್ನಿಗೆ ಒತ್ತಾಯಿಸುವಂತಿಲ್ಲ: ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು!

ಪತ್ನಿಯ ಮೊಬೈಲ್ ಫೋನ್ ಪಾಸ್‌ವರ್ಡ್ ಅಥವಾ ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳುವಂತೆ ಒತ್ತಾಯಿಸುವುದು ಆಕೆಯ ಗೌಪ್ಯತೆಯ ಹಕ್ಕಿನ ಉಲ್ಲಂಘನೆ ಎಂದು ಛತ್ತೀಸ್‌ಗಢ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ