“ಕಾಂತಾರ 1: ರಿಷಬ್ ಶೆಟ್ಟಿ ನಿರ್ದೇಶನದ ʻಕಾಂತಾರʼ ಪ್ರೀಕ್ವೆಲ್‌ʼಗೆ ಭಾರಿ ನಿರೀಕ್ಷೆ, ಪ್ರೀಮಿಯರ್‌ ಶೋ ಬಗ್ಗೆ ಚರ್ಚೆ ಶುರು”

Date:

spot_img

‘ಕಾಂತಾರ ಚಾಪ್ಟರ್ 1’ ಸಿನಿಮಾ ಬಗ್ಗೆ ದಿನೇ ದಿನೇ ಕುತೂಹಲ ಹೆಚ್ಚಾಗುತ್ತಿದೆ. ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ಈ ಬಹುನಿರೀಕ್ಷಿತ ಸಿನಿಮಾದ ಪ್ರೀಕ್ವೆಲ್ ಬಿಡುಗಡೆಗೆ ಅಭಿಮಾನಿಗಳು ತುದಿಗಾಲಲ್ಲಿ ನಿಂತಿದ್ದಾರೆ.

ರಿಷಬ್ ಶೆಟ್ಟಿ ʼಕಾಂತಾರʼ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಹೊರಹೊಮ್ಮಿದರು. ಕೇವಲ ₹16 ಕೋಟಿ ಬಜೆಟ್‌ನಲ್ಲಿ ನಿರ್ಮಾಣವಾದ ಈ ಚಿತ್ರ ₹400 ಕೋಟಿಗೂ ಹೆಚ್ಚು ಗಳಿಸಿ ಭರ್ಜರಿ ಯಶಸ್ಸು ಕಂಡಿತು. ಅದರ ನಂತರ, ʻಕಾಂತಾರʼ 100ನೇ ದಿನದ ಸಂಭ್ರಮದಂದು ರಿಷಬ್ ಶೆಟ್ಟಿ ಅವರು ʻಕಾಂತಾರ ಪ್ರೀಕ್ವೆಲ್‌ʼ (ʻಕಾಂತಾರ ಚಾಪ್ಟರ್‌ 1ʼ) ಬಗ್ಗೆ ಘೋಷಿಸಿದ್ದರು. ಅಂದಿನಿಂದ, ಈ ಚಿತ್ರದ ಬಗ್ಗೆ ಸಿನಿಪ್ರಿಯರಲ್ಲಿ ನಿರೀಕ್ಷೆಗಳು ಹೆಚ್ಚಾಗಿವೆ.

ಹೊಂಬಾಳೆ ಫಿಲ್ಮ್ಸ್ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದು, ಈ ಬಾರಿ ʻಕಾಂತಾರ ಚಾಪ್ಟರ್ 1ʼ ಚಿತ್ರವು ಕನ್ನಡ, ಬಂಗಾಲಿ, ಇಂಗ್ಲಿಷ್ ಸೇರಿದಂತೆ 7 ಭಾಷೆಗಳಲ್ಲಿ 30 ದೇಶಗಳಲ್ಲಿ ತೆರೆಗೆ ಬರಲು ಸಿದ್ಧವಾಗಿದೆ. ಅಮೆರಿಕ, ಬ್ರಿಟನ್, ಕೆನಡಾ, ನೇಪಾಳ, ಮಲೇಷ್ಯಾ ಸೇರಿದಂತೆ ಹಲವು ದೇಶಗಳಲ್ಲಿ ಪ್ರೇಕ್ಷಕರು ‘ಕಾಂತಾರ’ದ ಹವಾ ನೋಡಲು ಕಾತುರರಾಗಿದ್ದಾರೆ.

ಚಿತ್ರದ ಬಿಡುಗಡೆ ಹತ್ತಿರವಾಗುತ್ತಿದ್ದಂತೆ ʻಕಾಂತಾರ ಚಾಪ್ಟರ್ 1ʼ ರ ʻಪೇಯ್ಡ್ ಪ್ರೀಮಿಯರ್ ಶೋʼ ಕುರಿತು ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿವೆ. ಕಳೆದ ಕೆಲವು ವರ್ಷಗಳಿಂದ ಅನೇಕ ಚಿತ್ರತಂಡಗಳು ಈ ತಂತ್ರವನ್ನು ಅನುಸರಿಸುತ್ತಿವೆ. ಈ ʻಪೇಯ್ಡ್ ಪ್ರೀಮಿಯರ್ ಶೋʼಗಳ ಮೂಲಕ ಚಿತ್ರದ ಬಗ್ಗೆ ಸಕಾರಾತ್ಮಕ ಅಭಿಪ್ರಾಯ ಮೂಡಿದರೆ, ಚಿತ್ರದ ಯಶಸ್ಸಿಗೆ ಅನುಕೂಲವಾಗುತ್ತದೆ. ʻಸೂರರೈ ಪೋಟ್ರುʼ ಹಾಗೂ ʻಕೆಜಿಎಫ್ʼನಂತಹ ಕೆಲವು ಚಿತ್ರಗಳ ಪ್ರೀಮಿಯರ್ ಶೋ ಯಶಸ್ವಿಯಾಗಿದ್ದು, ಚಿತ್ರದ ಗಳಿಕೆಗೆ ನೆರವಾಗಿವೆ.

2022ರಲ್ಲಿ ʻಕಾಂತಾರʼ ಚಿತ್ರದ ಪ್ರೀಮಿಯರ್ ಶೋ ಆಯೋಜಿಸಲಾಗಿತ್ತು. ಈ ಪ್ರೀಮಿಯರ್ ಶೋಗಳಿಂದ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಈಗ ʻಕಾಂತಾರ ಚಾಪ್ಟರ್ 1ʼ ಸಿನಿಮಾಗೂ ಪ್ರೀಮಿಯರ್ ಶೋಗಳನ್ನು ಆಯೋಜಿಸುವ ಸಾಧ್ಯತೆ ಇದೆ.

ಅಕ್ಟೋಬರ್ 2 ರಂದು ಸಿನಿಮಾ ಬಿಡುಗಡೆಯಾಗಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡುತ್ತಿವೆ. ಹಾಗಾಗಿ, ಅಕ್ಟೋಬರ್ 1 ರ ರಾತ್ರಿ 7:30ಕ್ಕೆ ಪ್ರೀಮಿಯರ್ ಶೋ ಇರಬಹುದು ಎಂದು ಅಭಿಮಾನಿಗಳು ಊಹಿಸುತ್ತಿದ್ದಾರೆ. ಆದರೆ, ಈ ಬಗ್ಗೆ ಚಿತ್ರತಂಡವಾಗಲೀ ಅಥವಾ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಆಗಲೀ ಅಧಿಕೃತವಾಗಿ ಯಾವುದೇ ಮಾಹಿತಿಯನ್ನು ನೀಡಿಲ್ಲ. ʻಕಾಂತಾರʼ ಒಂದು ದೊಡ್ಡ ಬಜೆಟ್‌ನ ಚಿತ್ರವಾಗಿರುವುದರಿಂದ, ಪ್ರೀಮಿಯರ್ ಶೋಗಳನ್ನು ಆಯೋಜಿಸುವ ಸಾಧ್ಯತೆ ಹೆಚ್ಚು.

ಚಿತ್ರದಲ್ಲಿ ರಿಷಬ್ ಶೆಟ್ಟಿ, ರುಕ್ಮಿಣಿ ವಸಂತ್ ಮತ್ತು ಗುಲ್ಶನ್ ದೇವಯ್ಯ ಅವರ ಪಾತ್ರಗಳ ಬಗ್ಗೆ ಮಾತ್ರ ಮಾಹಿತಿ ಲಭ್ಯವಾಗಿದೆ. ಚಿತ್ರದಲ್ಲಿ ಇನ್ನೂ ಹಲವಾರು ಖ್ಯಾತ ಕಲಾವಿದರು ನಟಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ಮತ್ತಷ್ಟು ಮಾಹಿತಿಯನ್ನು ಚಿತ್ರತಂಡ ಗೌಪ್ಯವಾಗಿ ಇಟ್ಟಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.