ಪೂಜಾ ಹೆಗ್ಡೆ ಟಾಲಿವುಡ್‌ಗೆ ಕಂಬ್ಯಾಕ್‌: ದುಲ್ಕರ್ ಸಲ್ಮಾನ್ ಜೊತೆ ಹೊಸ ಸಿನಿಮಾ

Date:

spot_img

ಹೈದರಾಬಾದ್: ಬಹುಭಾಷಾ ನಟಿ ಪೂಜಾ ಹೆಗ್ಡೆ ಬಾಲಿವುಡ್‌ನಿಂದ ಮತ್ತೆ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ರಜನಿಕಾಂತ್‌ ಅವರ ‘ಕೂಲಿ’ ಚಿತ್ರದ ‘ಮೋನಿಕಾ’ ಹಾಡಿನಲ್ಲಿ ಸಖತ್‌ ಡ್ಯಾನ್ಸ್‌ ಮಾಡಿ ಗಮನ ಸೆಳೆದಿದ್ದ ಅವರು, ಇದೀಗ ಐದು ವರ್ಷಗಳ ಬಳಿಕ ಟಾಲಿವುಡ್‌ಗೆ ಮರಳಿದ್ದಾರೆ. ಮಾಲಿವುಡ್ ನಟ ದುಲ್ಕರ್ ಸಲ್ಮಾನ್ ಜೊತೆ ಹೊಸ ಚಿತ್ರವೊಂದರಲ್ಲಿ ಅವರು ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.

‘DQ41’ ಚಿತ್ರಕ್ಕೆ ಮುಹೂರ್ತ

ದುಲ್ಕರ್‌ ಸಲ್ಮಾನ್‌ರವರ ‘ಲಕ್ಕಿ ಭಾಸ್ಕರ್‌’ ಚಿತ್ರದ ನಂತರದ ಈ ಹೊಸ ಸಿನಿಮಾಗೆ ‘DQ41’ ಎಂದು ತಾತ್ಕಾಲಿಕ ಹೆಸರಿಡಲಾಗಿದೆ. ಚಿತ್ರದ ಮುಹೂರ್ತ ಈಗಾಗಲೇ ನೆರವೇರಿದ್ದು, ಪೂಜಾ ಹೆಗ್ಡೆ ಮತ್ತು ದುಲ್ಕರ್‌ ಸಲ್ಮಾನ್ ಜೊತೆಗಿರುವ ಶೂಟಿಂಗ್‌ನ ಬಿಟಿಎಸ್‌ (BTS) ವಿಡಿಯೋ ಕೂಡ ರಿಲೀಸ್‌ ಆಗಿದೆ. ಇಬ್ಬರೂ ತಾರೆಯರು ಪರಸ್ಪರ ಬಹಳ ಕ್ಯೂಟ್‌ ಆಗಿ ಕಾಣಿಸಿಕೊಂಡಿರುವ ವಿಡಿಯೋ ಚಿತ್ರರಂಗದಲ್ಲಿ ಕುತೂಹಲ ಮೂಡಿಸಿದೆ.

ಈ ಚಿತ್ರಕ್ಕೆ ರವಿ ನೆಲಕುಡಿತಿ ನಿರ್ದೇಶನ ಮಾಡುತ್ತಿದ್ದು, ಇದು ಅವರ ಚೊಚ್ಚಲ ಚಿತ್ರವಾಗಿದೆ. ಸುಧಾಕರ್ ಚೆರುಕುರಿ ಅವರ ‘ಎಸ್‌ಎಲ್‌ವಿ ಸಿನಿಮಾಸ್‌’ ಬ್ಯಾನರ್ ಅಡಿ ನಿರ್ಮಾಣವಾಗಲಿರುವ ಈ ಚಿತ್ರಕ್ಕೆ ಜಿ.ವಿ. ಪ್ರಕಾಶ್ ಕುಮಾರ್ ಸಂಗೀತ ನೀಡಲಿದ್ದಾರೆ. 2020ರಲ್ಲಿ ಸಹಿ ಹಾಕಿದ್ದ 2022ರಲ್ಲಿ ಬಂದ ಚಿರಂಜೀವಿ – ರಾಮ್‌ಚರಣ್‌ ಅವರ ʼಆಚಾರ್ಯʼ ಸಿನಿಮಾದಲ್ಲಿ  ಅವರು ನಾಯಕಿಯಾಗಿ ಕಾಣಿಸಿಕೊಂಡಿದ್ದರು.ವೆಂಕಟೇಶ್‌ ಅವರ ʼF3ʼ ಅತಿಥಿ ಪಾತ್ರದಲ್ಲಿ ಪೂಜಾ ನಟಿಸಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.