ಮುಂಬೈ: ಬಾಂದ್ರಾದಲ್ಲಿ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ತಡರಾತ್ರಿ 2 ಗಂಟೆಗೆ ದರೋಡೆ ಮಾಡಲು ಬಂದ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ. ಸೈಫ್ ಅಲಿ ಖಾನ್ ಅವರಿಗೆ ಚಾಕುವಿನಿಂದ ಇರಿದು, ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಸೈಫ್ ಅಲಿ ಖಾನ್ ಅವರ ದೇಹದಲ್ಲಿ ಆರಕ್ಕೂ ಹೆಚ್ಚು ಗಾಯಗಳು ಕಂಡುಬಂದಿವೆ. ಅವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೈಫ್ ಅಲಿ ಖಾನ್ ಅವರ ದೇಹದಲ್ಲಿ ಚಾಕುವಿನ ತುಂಡು ಪತ್ತೆಯಾಗಿದ್ದು ಸರ್ಜರಿಯ ವೇಳೆ ಇದನ್ನು ವೈದ್ಯರು ಹೊರತೆಗೆದಿದ್ದಾರೆ.
ಈ ದಾಳಿಯ ಹಿನ್ನೆಲೆ ಮನೆಯ ಕೆಲಸದವರ ಮೇಲೆ ಅನುಮಾನಗಳು ವ್ಯಕ್ತವಾಗಿವೆ. ಸೈಫ್ ಅಲಿ ಖಾನ್ ಅವರ ಮನೆಗೆ 4 ಗಾರ್ಡ್ಸ್ ಇದ್ದರೂ ಕಳ್ಳರು ಹೇಗೆ ಬಂದಿದ್ದಾರೆ ಎಂಬ ಪ್ರಶ್ನೆ ಕೇಳಿಬರುತ್ತಿದೆ. ಪೊಲೀಸರು ತನಿಖೆ ನಡೆಸಲು 7 ತಂಡಗಳನ್ನು ರಚಿಸಿದ್ದಾರೆ.
ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿ
Date: