
Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
ತಲಪಾಡಿ ನಿವಾಸಿ ಅಂಕಿತ್ ಮಾಲಕತ್ವದ ಮಾರುತಿ ರಿಟ್ಜ್ ಕಾರು ಇದ್ದಕ್ಕಿದ್ದಂತೆ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.