
ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಚಿಕ್ಕಲ್ ಬೆಟ್ಟು ಅರಂತ ಬೆಟ್ಟು ಬಳಿ ದಿವಂಗತ ಯಶೋಧ ಶೆಟ್ಟಿ ಅವರ ಸ್ಮರಣಾರ್ಥ ನೂತನವಾದ ಬಸ್ ನಿಲ್ದಾಣ ಉದ್ಘಾಟನೆಗೊಂಡಿತು. ಈ ಕಾರ್ಯಕ್ರಮದಲ್ಲಿ ಹಿರ್ಗಾನ ವ್ಯವಸಾಯ ಸಂಘದ ಅಧ್ಯಕ್ಷರಾದ ಶ್ರೀ ಸಿರಿಯಣ್ಣ ಶೆಟ್ಟಿ ಹಾಗೂ ಮಂಗಿಲಾರು ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಚಂದ್ರಶೇಖರ ಹೆಗ್ಡೆಯವರು ಹಾಗೂ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಸಂತೋಷ್ ಶೆಟ್ಟಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ದಿನೇಶ್ ಪೂಜಾರಿ ಹಾಗೂ ಒಡಿಯೂರು ಗುರುದೇವ ಸೇವಾ ಬಳಗದ ಅಧ್ಯಕ್ಷರಾದ ಶ್ರೀ ತಾರಾನಾಥ ಶೆಟ್ಟಿ ದೇವಸ್ಥಾನದ ಅರ್ಚಕರಾದ ಶ್ರೀ ಲಕ್ಷ್ಮೀನಾರಾಯಣ ಭಟ್, ಶ್ರೀ ಗಣೇಶ್ ಭಟ್ ಹಾಗೂ ಎಲ್ಲಾ ಗ್ರಾಮಸ್ಥರ ಸಮ್ಮುಖದಲ್ಲಿ ಉದ್ಘಾಟನೆಗೊಂಡಿತು .ಬಸ್ ನಿಲ್ದಾಣದ ದಾನಿಗಳಾದ ಸುಂದರಿ ನಿವಾಸದ ಶ್ರೀ ಸಾಧು ಶೆಟ್ಟಿ ಹಾಗೂ ಮನೆಯವರು ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಗ್ರಾಮಸ್ಥರಿಗೂ ಕೃತಜ್ಞತೆಯನ್ನು ಸಲ್ಲಿಸಿದರು.