ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದ 14ರ ಹರೆಯದ ವೈಭವ್ ಸೂರ್ಯವಂಶಿ!

Date:

spot_img

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್‌) ಕ್ರಿಕೆಟ್‌ ಇತಿಹಾಸದಲ್ಲಿ ಹೊಸ ಮಜಲು ಬರೆಯಲಾಗಿದೆ. ಕೇವಲ 14 ವರ್ಷದ ವೈಭವ್ ಸೂರ್ಯವಂಶಿ, ತಮ್ಮ ಚೊಚ್ಚಲ ಐಪಿಎಲ್ ಸೀಸನ್‌ ನಲ್ಲಿಯೇ ಶತಕ ಸಿಡಿಸಿ, ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಜೈಪುರದ ಸವಾಯಿ ಮಾನ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ, ವೈಭವ್ ಕೇವಲ 35 ಎಸೆತಗಳಲ್ಲಿ ಶತಕ ಬಾರಿಸಿ ಪ್ರೇಕ್ಷಕರನ್ನು ರೋಮಾಂಚನಗೊಳಿಸಿದರು. ಈ ಶತಕದೊಂದಿಗೆ ಅವರು ಐಪಿಎಲ್‌ನಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆಗೆ ಪಾತ್ರರಾಗಿದ್ದಾರೆ.

  • ಇದೇ ಪಂದ್ಯದ ಮೂಲಕ ವೈಭವ್ ಸೂರ್ಯವಂಶಿ:
  • ಐಪಿಎಲ್ ಇತಿಹಾಸದಲ್ಲಿ ಅತೀ ಕಿರಿಯ ಶತಕದಾತ,
  • ಟಿ20 ಕ್ರಿಕೆಟ್‌ನಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ,
  • ಐಪಿಎಲ್‌ನಲ್ಲಿ ಕ್ರಿಸ್ ಗೇಲ್ (30 ಎಸೆತಗಳು) ನಂತರ ಅತೀ ವೇಗವಾಗಿ ಶತಕ ಬಾರಿಸಿದ ಆಟಗಾರ ಎಂಬ ಹಿರಿಮೆಗಳನ್ನೂ ಪಡೆದಿದ್ದಾರೆ.

ಇದಕ್ಕೂ ಮುನ್ನ, ಟಿ20 ಕ್ರಿಕೆಟ್‌ನಲ್ಲಿ ವಿಜಯ್ ಝೋಲ್ ಅವರು ಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆಗೆ ಪಾತ್ರರಾಗಿದ್ದರು. ಅವರು 2013ರಲ್ಲಿ 18 ವರ್ಷದ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು. ಇದೀಗ, ವೈಭವ್ ಅವರು ಕೇವಲ 14ರ ಹರೆಯದಲ್ಲಿಯೇ ಈ ದಾಖಲೆಯನ್ನು ಮುರಿದಿದ್ದಾರೆ.

ಅಲ್ಲದೇ, ವೈಭವ್ ಅವರು 15 ವರ್ಷದೊಳಗೆ 20 ಶತಕಗಳನ್ನು ಬಾರಿಸಿದ ವಿಶ್ವದ ಏಕೈಕ ಬ್ಯಾಟ್ಸ್‌ಮನ್ ಎಂಬ ಇತಿಹಾಸ ಕೂಡ ರಚಿಸಿದ್ದಾರೆ.

ಇದರಿಂದಾಗಿ, ವೈಭವ್ ಸೂರ್ಯವಂಶಿಯ ಸ್ಪೋಟಕ ಶತಕದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡವು ಗುಜರಾತ್ ಟೈಟಾನ್ಸ್ ನೀಡಿದ್ದ 209 ರನ್‌ಗಳ ಗುರಿಯನ್ನು ಯಶಸ್ವಿಯಾಗಿ ಚೇಸ್ ಮಾಡಿ ಭರ್ಜರಿ ಗೆಲುವು ದಾಖಲಿಸಿದೆ.

ವೈಭವ್ ಸೂರ್ಯವಂಶಿಯ ಈ ಸಾಧನೆ, ಕ್ರೀಡಾ ಲೋಕದಲ್ಲಿ ಭಾರೀ ಪ್ರಶಂಸೆಗಳಿಗೆ ಪಾತ್ರವಾಗುತ್ತಿದ್ದು, ಭಾರತ ಕ್ರಿಕೆಟ್ ಭವಿಷ್ಯದಲ್ಲಿ ಹೊಸ ತಾರೆಯ ಉದಯವಾಯಿತು ಎನ್ನಬಹುದು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.