
ಬೆಳ್ತಂಗಡಿ :ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಹೃದಯಾಘಾತದಿಂದ ಒಂಭತ್ತನೇ ತರಗತಿ ಪೂರ್ಣಗೊಳಿಸಿ ಹತ್ತನೇ ತರಗತಿಗೆ ಹೋಗಬೇಕಿದ್ದ ವಿದ್ಯಾರ್ಥಿಯೊಬ್ಬ ಸಾವಿಗೀಡಾದ ದುಃಖದ ಘಟನೆ ಮೇ 4ರಂದು ನಡೆದಿದೆ.
ಧರ್ಮಸ್ಥಳದ ಖಾಸಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗೋವಿಂದ ಗೌಡರ ಪುತ್ರ ಪ್ರಥಮ್ (16) ಎಂಬ ವಿದ್ಯಾರ್ಥಿ ಮಧ್ಯಾಹ್ನ ಮನೆ ಬಳಿಯಲ್ಲಿ ಆಟವಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತು. ತಕ್ಷಣವೇ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಚಿಕಿತ್ಸೆ ಫಲಿಸದೆ ಅವನು ಮೃತಪಟ್ಟಿದ್ದಾನೆ.
ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.