
ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ 2024 25ನೇ ಸಾಲಿನ ಎನ್ಎಸ್ಎಸ್ ಕ್ಯಾಂಪ್ ಶ್ರೀ ಗುರುಕುಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮಾಳ ಇಲ್ಲಿ ನಡೆಯಿತು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಶಾಸಕರಾದ ವಿ ಸುನಿಲ್ ಕುಮಾರ್ ಇವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು ಉದ್ಘಾಟನಾ ಭಾಷಣದಲ್ಲಿ ಶಾಸಕರು ವಿದ್ಯಾರ್ಥಿಗಳಿಗೆ ಕೆಲವು ಕಿವಿ ಮಾತುಗಳನ್ನು ಹೇಳಿದರು ಕ್ಯಾಂಪ ನಂತರ ಮಾಡಿದ ಕೆಲಸಗಳನ್ನು ನೆನಪಿನಲ್ಲಿಟ್ಟುಕೊಂಡು ತೆರಳಬೇಕು ಎಂಬುದಾಗಿ ತಿಳಿಸಿದರು ಈ ಕಾರ್ಯಕ್ರಮದಲ್ಲಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ನಿರಂಜನ್ ಸರ್ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಭಾಸ್ಕರ್ ಟಿ ಮಾಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಉಮೇಶ್ ಪೂಜಾರಿ ಶ್ರೀ ಗುರುಕುಲ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಗಜಾನನ ಮರಾಠೆ ಹಾಗೂ ಕಾಲೇಜಿನ ಪ್ರಾಧ್ಯಾಪಕರಾದ ಶ್ರೀನಿವಾಸ್ ಸರ್ ಮತ್ತು ಶಾಲಾ ಮುಖ್ಯ ಶಿಕ್ಷಕಿ ಪೂರ್ಣಿಮಾ ಉಪಸ್ಥಿತರಿದ್ದರು ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರು ಕಾಲೇಜಿನ ಪ್ರಾಧ್ಯಾಪಕರುಗಳು ಊರ ಹಿರಿಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದು ಕಾರ್ಯಕ್ರಮದ ಎಲ್ಲಾ ವ್ಯವಸ್ಥೆಗಳನ್ನು ಕಾಲೇಜಿನ ವಿದ್ಯಾರ್ಥಿಗಳು ನಿರ್ವಹಿಸಿದರು.