ಮಂಗಳೂರಿನಲ್ಲಿ 4 ಕೋಟಿ ರೂ. ಉದ್ಯೋಗ ವಂಚನೆ: ಕೆಕೋಕಾ ಕಾಯ್ದೆಯಡಿ ಇಬ್ಬರು ಆರೋಪಿಗಳ ಬಂಧನ!

Date:

spot_img

ಮಂಗಳೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 300ಕ್ಕೂ ಹೆಚ್ಚು ಮಂದಿಯಿಂದ ಸುಮಾರು ₹4 ಕೋಟಿಗೂ ಅಧಿಕ ವಂಚನೆ ಮಾಡಿದ ಆರೋಪದಡಿ, ಇಬ್ಬರು ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಮುಂಬೈನಲ್ಲಿ ಬಂಧಿಸಿದ್ದಾರೆ. ಈ ಕುರಿತು ನಗರ ಪೊಲೀಸ್ ಕಮಿಷನರ್ ಸುಧೀರ್‌ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಬಂಧಿತ ಆರೋಪಿಗಳನ್ನು ದಿಲ್ ಶಾದ್ ಅಬ್ದುಲ್ ಸತ್ತಾರ್‌ಖಾನ್ (45) ಮತ್ತು ಕಿಶೋರ್‌ಕುಮಾರ್ (34) ಎಂದು ಗುರುತಿಸಲಾಗಿದೆ. ಆರೋಪಿಗಳ ವಿರುದ್ಧ ತನಿಖೆ ಆರಂಭವಾಗಿದೆ.

ಪ್ರಕರಣದ ವಿವರ: ಮಂಗಳೂರಿನ ಬೆಂದೂರ್‌ವೆಲ್‌ನಲ್ಲಿ ‘ಹೈರ್‌ಗೋ ಎಲಿಗೆಂಟ್ ಓವರ್‌ಸೀಸ್ ಇಂಟರ್‌ನ್ಯಾಷನಲ್ ಪ್ರೈ.ಲಿ.’ ಎಂಬ ಹೆಸರಿನಲ್ಲಿ ಕಚೇರಿ ತೆರೆದಿದ್ದ ಆರೋಪಿಗಳು, ಸುಮಾರು 300 ಮಂದಿಯಿಂದ ಲಕ್ಷಾಂತರ ರೂಪಾಯಿ ಸಂಗ್ರಹಿಸಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪೊಲೀಸ್ ತಂಡವು ಆರೋಪಿಗಳನ್ನು ಮುಂಬೈನಲ್ಲಿ ವಶಕ್ಕೆ ಪಡೆದಿದ್ದು, ಇವರ ವಿರುದ್ಧ ಮಂಗಳೂರಿನ ಉತ್ತರ ಪೊಲೀಸ್ ಠಾಣೆ ಹಾಗೂ ಮುಂಬೈಯ ನವಿ ಮುಂಬೈ ಠಾಣೆಯಲ್ಲಿಯೂ ವಂಚನೆ ಪ್ರಕರಣಗಳು ದಾಖಲಾಗಿವೆ. ಆರೋಪಿಗಳ ಮೇಲೆ ಕರ್ನಾಟಕ ಕಂಟ್ರೋಲ್ ಆಫ್ ಆರ್ಗನೈಸ್ಡ್ ಕ್ರೈಂ (ಕೆಕೋಕಾ) ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ. ಈ ಕಾಯ್ದೆಯಡಿ ದಾಖಲಾದ ಪ್ರಕರಣಗಳಲ್ಲಿ ಜಾಮೀನು ಪಡೆಯುವುದು ಕಠಿಣ ಎಂದು ಕಮಿಷನರ್ ಸುಧೀರ್‌ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಕಮಿಷನರ್ ಎಚ್ಚರಿಕೆ: ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ಎರಡು ಅಪರಾಧ ಪ್ರಕರಣಗಳು ದಾಖಲಾದವರ ವಿರುದ್ಧ ಕೆಕೋಕಾ ಕಾಯ್ದೆಯಡಿ ಕೇಸು ದಾಖಲಿಸಿ, ಜಾಮೀನು ಸಿಗದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಮಿಷನರ್ ಸುಧೀರ್‌ಕುಮಾರ್ ರೆಡ್ಡಿ ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.