spot_img

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ 474 ಯುನಿಟ್ ರಕ್ತ ಸಂಗ್ರಹ

Date:

spot_img
spot_img

ನಿಟ್ಟೆ: ‘ರಕ್ತಮಾಡುವುದರಿಂದ ನಾವು ಇನ್ನೊಬ್ಬರ ಜೀವ ಉಳಿಯಲು ಕಾರಣವಾಗುತ್ತೇವೆ. ಮಾನವ ಜೀವನದಲ್ಲಿ ರಕ್ತದಾನವೆಂಬ ಪುಣ್ಯಕಾರ್ಯದಲ್ಲಿ ನಾವು ಪಾಲ್ಗೊಳ್ಳಬೇಕು’ ಎಂದು ಲಯನ್ಸ್ ಜಿಲ್ಲೆ 317Cಯ ಜಿಲ್ಲಾ 2ನೇ ವೈಸ್ ಗವರ್ನರ್ ಪಿ.ಎಂ.ಜೆ.ಎಫ್ ಲಯನ್ ಹರಿಪ್ರಸಾದ್ ರೈ ಅಭಿಪ್ರಾಯಪಟ್ಟರು. ಅವರು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್), ರೆಡ್‌ಕ್ರಾಸ್ ಸೊಸೈಟಿ, 6 (ಕೆ.ಎ.ಆರ್) ನೇವಿ ಎನ್.ಸಿ.ಸಿ ಸಬ್‌ಯುನಿಟ್ ನಿಟ್ಟೆ, ಮೆಕ್ಯಾನಿಕಲ್ ವಿಭಾಗದ ಏಐಎಂಎಸ್ ಘಟಕ, ರೋಟರಿಕ್ಲಬ್ ನಿಟ್ಟೆ, ಲಯನ್ಸ್ ಕ್ಲಬ್ ಹಿರಿಯಡ್ಕ, ಲಯನ್ಸ್ ಕ್ಲಬ್ ಬಪ್ಪನಾಡು, ಹೆಚ್.ಡಿ.ಎಫ್.ಸಿ ಬ್ಯಾಂಕ್, ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜು, ನಿಟ್ಟೆ ಗಾಜ್ರಿಯಾ ಆಸ್ಪತ್ರೆ ಮತ್ತು ಉಡುಪಿ ಜಿಲ್ಲಾ ಆಸ್ಪತ್ರೆಯ ಸಂಯುಕ್ತ ಆಶ್ರಯದಲ್ಲಿ ಅ.15 ರಂದು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ‘ನಿಟ್ಟೆ ತಾಂತ್ರಿಕ ಕಾಲೇಜಿನ ಈ ಯೋಜನೆಯಲ್ಲಿ ವಿವಿಧ ಸಂಘ ಸಂಸ್ಥೆಗಳು ಕೈಜೋಡಿಸಿರುವುದು ಶ್ಲಾಘನೀಯ. ಇಂತಹ ಶಿಬಿರಗಳು ಸಮಾಜದ ಆರೋಗ್ಯದತ್ತ ಗಮನ ಹರಿಸುವುದರ ಜೊತೆಗೆ ಯುವಕರಲ್ಲಿ ಸೇವಾ ಮನೋಭಾವ ಬೆಳೆಸಲು ಸಹಕಾರಿಯಾಗಿವೆ’ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಳೂಣ್ಕರ್ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ‘ರಕ್ತದಾನ ಶಿಬಿರವು ಒಂದು ಉತ್ತಮ ಯೋಜನೆಯಾಗಿದ್ದು ಇದಕ್ಕೆ ವಿದ್ಯಾರ್ಥಿಗಳ ಬೆಂಬಲ ಅಗತ್ಯ. ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಈ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳುವ ನಿಟ್ಟಿನಲ್ಲಿ ವಿವಿಧ ಸಂಘಸಂಸ್ಥೆಗಳು ಹಾಗೂ ನಿಟ್ಟೆ ಸಂಸ್ಥೆಯ 2 ಆಸ್ಪತ್ರೆ ಹಾಗೂ ಉಡುಪಿ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿಗಳ ಹಾಗೂ ಕಾಲೇಜಿನ ವಿದ್ಯಾರ್ಥಿಗಳ ಶ್ರಮ ಶ್ಲಾಘನೀಯ. ಕಾಲೇಜಿನಲ್ಲಿ ಇರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಪರಿಗಣಿಸಿ ರಕ್ತದಾನ ಶಿಬಿರವನ್ನು ವರ್ಷಕ್ಕೆ ಎರಡು ಬಾರಿ ನಡೆಸುವ ಬಗ್ಗೆ ಆಶಯವಿದೆ’ ಎಂದರು.

ನಿಟ್ಟೆ ಕ್ಯಾಂಪಸ್ ನ ನಿರ್ವಹಣೆ ಹಾಗೂ ಅಭಿವೃದ್ದಿ ವಿಭಾಗದ ನಿರ್ದೇಶಕ ಯೋಗೀಶ್ ಹೆಗ್ಡೆ, ನಿಟ್ಟೆ ರೋಟರಿ ಕ್ಲಬ್‌ನ ಅಧ್ಯಕ್ಷ ಡಾ. ರಘುನಂದನ್ ಕೆ ಆರ್, ಹಿರಿಯಡ್ಕ ಲಯನ್ಸ್ ಕ್ಲಬ್ ಅಧ್ಯಕ್ಷ ರಘುವೀರ್ ಶೆಟ್ಟಿಗಾರ್, ಬಪ್ಪನಾಡು ಲಯನ್ಸ್ ಕ್ಲಬ್ ಅಧ್ಯಕ್ಷ ಅನಿಲ್ ಕುಮಾರ್, ಎಚ್.ಡಿ.ಎಫ್.ಸಿ ಬ್ಯಾಂಕ್ ಅಧಿಕಾರಿ ರಾಘವೇಂದ್ರ ನಾಯಕ್, ನಿಟ್ಟೆ ರೆಡ್‌ಕ್ರಾಸ್‌ನ ಮುಖ್ಯಸ್ಥ ಡಾ.ಜನಾರ್ದನ್ ನಾಯಕ್, ಎನ್.ಸಿ.ಸಿ ಆಫೀಸರ್ ಡಾ.ಶಿವಪ್ರಸಾದ್ ಶೆಟ್ಟಿ, ಏಐಎಂಎಸ್ ಸಂಯೋಜಕ ಡಾ.ಮೆಲ್ವಿನ್, ಎನ್.ಎಸ್.ಎಸ್ ಅಧಿಕಾರಿ ಡಾ. ಧನಂಜಯ್, ಕೆ.ಎಸ್ ಹೆಗ್ಡೆ ಆಸ್ಪತ್ರೆ ಹಾಗೂ ಉಡುಪಿ ಜಿಲ್ಲಾ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಪ್ರತೀಕ್ಷಾ ನಾಯಕ್ ಸ್ವಾಗತಿಸಿದರು. ವಿದ್ಯಾರ್ಥಿನಿ ನಿಧಿ ವಂದಿಸಿದರು. ವಿದ್ಯಾರ್ಥಿನಿ ವರ್ಷಾ ಎನ್ ಕಾರ್ಯಕ್ರಮ ನಿರೂಪಿಸಿದರು.
ಈ ಒಂದು ದಿನದ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು, ಪ್ರಾಧ್ಯಾಪಕ ಹಾಗೂ ಭೋದಕೇತರ ವರ್ಗದವರ ರಕ್ತದಾನದೊಂದಿಗೆ 474 ಯುನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ ಎಂದು ಕಾಲೇಜಿನ ಪತ್ರಿಕಾ ಪ್ರಕಟಣೆಯಲ್ಲಿ ಪ್ರಾಂಶುಪಾಲರು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ಧನತ್ರಯೋದಶಿ

ದೀಪಾವಳಿ ಹಬ್ಬದ ಮೊದಲ ದಿನವಾದ ಧನತ್ರಯೋದಶಿ (ಧನತೇರಸ್‌) ಯನ್ನು, ಆಶ್ವಯುಜ ಮಾಸದ ಕೃಷ್ಣ ಪಕ್ಷದ 13ನೇ ದಿನದಂದು ಸಂಭ್ರಮದಿಂದ ಆಚರಿಸಲಾಗುತ್ತದೆ

ಸೀರೆಯ ಸೌಂದರ್ಯಕ್ಕೆ ಆಕಾರ ಮುಖ್ಯವಲ್ಲ: ಮಹಿಳೆಯರಿಗಾಗಿ ಸೀರೆಯ ವಿನ್ಯಾಸ ಮತ್ತು ಶೈಲಿಯ ವಿಶೇಷ ಮಾರ್ಗದರ್ಶಿ

ದೇಹದ ಗಾತ್ರ ಎಷ್ಟೇ ಇದ್ದರೂ, ಸರಿಯಾದ ಆಯ್ಕೆ ಮತ್ತು ಡ್ರೇಪಿಂಗ್ ತಂತ್ರಗಳಿಂದ ಪ್ರತಿ ಪ್ಲಸ್ ಸೈಜ್ ಮಹಿಳೆಯೂ ಸೀರೆಯಯಲ್ಲಿ ವಿಶ್ವಾಸ ಮತ್ತು ಆಕರ್ಷಣೆಯಿಂದ ಮಿಂಚಬಹುದು

ಶಿವಮೊಗ್ಗ: ಧರ್ಮಸ್ಥಳ ಪ್ರಕರಣ; ಆರೋಪಿ ಚಿನ್ನಯ್ಯನ ವಿಚಾರಣೆ ಮತ್ತೆ ಆರಂಭ

ಧರ್ಮಸ್ಥಳ ಪರಿಸರದಲ್ಲಿ ನಡೆದಿದೆ ಎನ್ನಲಾದ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (ಎಸ್ಐಟಿ) ಅಧಿಕಾರಿಗಳು, ಪ್ರಮುಖ ಆರೋಪಿ ಚಿನ್ನಯ್ಯನನ್ನು ವಿಚಾರಣೆಗೊಳಪಡಿಸಲು ಶಿವಮೊಗ್ಗಕ್ಕೆ ಆಗಮಿಸಿದ್ದಾರೆ.

‘ಹಿಂದೂ ಹುಡುಗಿಯರು ಜಿಮ್‌ಗೆ ಹೋಗಬಾರದು ಬಿಜೆಪಿ ಶಾಸಕರಿಂದ ವಿವಾದಾತ್ಮಕ ಹೇಳಿಕೆ

ಮಹಾರಾಷ್ಟ್ರದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕರಾದ ಗೋಪಿಚಂದ್ ಪಡಲ್ಕರ್ ಅವರು ಹಿಂದೂ ಸಮುದಾಯದ ಯುವತಿಯರ ಕುರಿತು ನೀಡಿರುವ ಹೇಳಿಕೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ