ಪ್ರಿಯಕರನಿಂದಲೇ ಬರ್ಬರ ಕಗ್ಗೊಲೆ: ಮಹಿಳೆಯ ಬಾಯಿಗೆ ಜಿಲೆಟಿನ್ ಇಟ್ಟು ಸ್ಫೋಟಿಸಿದ ಆರೋಪಿ

Date:

spot_img

ಮೈಸೂರು : ಪ್ರಿಯಕರನೊಬ್ಬ ವಿವಾಹಿತ ಮಹಿಳೆಯ ಬಾಯಿಗೆ ಜಿಲೆಟಿನ್ ಕಡ್ಡಿ ಇರಿಸಿ ಸ್ಫೋಟಿಸಿ ಕಗ್ಗೊಲೆ ಮಾಡಿರುವ ಭೀಕರ ಘಟನೆ ಮೈಸೂರಿನಲ್ಲಿ ನಡೆದಿದೆ. ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಗ್ರಾಮದ ಲಾಡ್ಜ್ ಒಂದರಲ್ಲಿ ಈ ಕೃತ್ಯ ಎಸಗಲಾಗಿದೆ.

ಗೆರಸನಹಳ್ಳಿ ಗ್ರಾಮದ ರಕ್ಷಿತಾ (20) ಕೊಲೆಯಾದ ಮಹಿಳೆ. ಬಿಳಿಕೆರೆ ಗ್ರಾಮದ ಸಿದ್ಧರಾಜು ಎಂಬಾತ ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ರಕ್ಷಿತಾ ಕೇರಳದ ವ್ಯಕ್ತಿಯೊಬ್ಬರೊಂದಿಗೆ ವಿವಾಹವಾಗಿದ್ದಳು ಮತ್ತು ದಂಪತಿಗೆ 2 ವರ್ಷದ ಮಗುವಿದೆ. ಆದರೆ, ಮದುವೆಗೂ ಮುನ್ನ ರಕ್ಷಿತಾ ಮತ್ತು ಆಕೆಯ ದೂರದ ಸಂಬಂಧಿಯೂ ಆಗಿದ್ದ ಸಿದ್ಧರಾಜು ನಡುವೆ ಪ್ರೇಮ ಸಂಬಂಧವಿತ್ತು. ಮದುವೆಯ ನಂತರವೂ ಅದು ಮುಂದುವರೆದಿತ್ತು ಎನ್ನಲಾಗಿದೆ.

ಕಳೆದ ಶುಕ್ರವಾರ, ಕೇರಳದಲ್ಲಿರುವ ಅತ್ತೆಗೆ ಹುಷಾರಿಲ್ಲ ಎಂದು ಸುಳ್ಳು ಹೇಳಿ ಮನೆಯಿಂದ ಬಂದ ರಕ್ಷಿತಾ, ಪ್ರಿಯಕರ ಸಿದ್ಧರಾಜು ಜೊತೆ ಕೆ.ಆರ್. ನಗರದ ದೇವಸ್ಥಾನಕ್ಕೆ ಹೋಗಿದ್ದಾರೆ. ನಂತರ ಸಾಲಿಗ್ರಾಮ ತಾಲ್ಲೂಕಿನ ಎಸ್‌.ಜಿ.ಆರ್. ಬಾರ್ ಅಂಡ್ ರೆಸ್ಟೋರೆಂಟ್‌ನಲ್ಲಿ ರೂಂ ಪಡೆದು ಉಳಿದುಕೊಂಡಿದ್ದಾರೆ. ರೂಂನಲ್ಲಿ ಇಬ್ಬರ ನಡುವೆ ಜಗಳವಾಗಿದ್ದು, ಈ ವೇಳೆ ಸಿದ್ಧರಾಜು ತನ್ನ ಜೊತೆ ತಂದಿದ್ದ ಜಿಲೆಟಿನ್ ಕಡ್ಡಿಯನ್ನ ರಕ್ಷಿತಾಳ ಬಾಯಿಗೆ ಇಟ್ಟು ಸ್ಫೋಟ ಮಾಡಿದ್ದಾನೆ.

ಸ್ಫೋಟದ ತೀವ್ರತೆಗೆ ರಕ್ಷಿತಾಳ ಮುಖ ಛಿದ್ರವಾಗಿದ್ದು, ಲಾಡ್ಜ್ ಸಿಬ್ಬಂದಿ ಗಮನಕ್ಕೆ ಬಂದಾಗ ಸಿದ್ಧರಾಜು “ಮೊಬೈಲ್ ಬ್ಲಾಸ್ಟ್ ಆಗಿದೆ” ಎಂದು ಸುಳ್ಳು ಹೇಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆದರೆ, ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಯಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಪರ್ಕಳ ಶಿಶು ಸ್ಪರ್ಧೆ ಮತ್ತು ತಾಯಿ ಮಗುವಿನ ಆರೋಗ್ಯ ಶಿಬಿರ 2026

ಪರ್ಕಳದಲ್ಲಿ ನಡೆದ ತಾಯಿ-ಮಗುವಿನ ಆರೋಗ್ಯ ಮಾಹಿತಿ ಕಾರ್ಯಕ್ರಮ ಹಾಗೂ ಮಕ್ಕಳ ಶಿಶು ಸ್ಪರ್ಧೆ 2026 ರ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.