100ಕ್ಕೂ ಹೆಚ್ಚು ಬೈಕ್ ಕದ್ದ ಕಿಲಾಡಿ ಕಳ್ಳನ ಸೆರೆ – 1.45 ಕೋಟಿ ಮೌಲ್ಯದ ವಾಹನ ವಶ!

Date:

spot_img

ಬೆಂಗಳೂರು: ಕಳೆದ ಮೂರು ವರ್ಷಗಳಿಂದ ದುಬಾರಿ ಬೆಲೆಯ 100ಕ್ಕೂ ಹೆಚ್ಚು ಬೈಕ್ ಕದ್ದಿದ್ದ ಆಂಧ್ರಪ್ರದೇಶ ಮೂಲದ ಪ್ರಸಾದ್ ಬಾಬುವನ್ನು ಕೆಆರ್ ಪುರ ಪೊಲೀಸರು ಬಂಧಿಸಿದ್ದಾರೆ. ಈತನಿಂದ 1.45 ಕೋಟಿ ಮೌಲ್ಯದ 100 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆಂಧ್ರಪ್ರದೇಶದ ಬಂಗಾರುಪಾಳ್ಯಂ ನಿವಾಸಿಯಾಗಿರುವ ಪ್ರಸಾದ್ ಬಾಬು ಪ್ರತಿದಿನ ಸಂಜೆ ಬಸ್‌ನಲ್ಲಿ ಬೆಂಗಳೂರಿಗೆ ಬಂದು, ಕೆಆರ್ ಪುರ, ಟಿನ್ ಫ್ಯಾಕ್ಟರಿ, ಮಹದೇವಪುರ ಜನವಸತಿ ಪ್ರದೇಶಗಳಲ್ಲಿ ತಿರುಗಾಡುತ್ತಿದ್ದ. ಮನೆ ಮುಂದೆ ನಿಲ್ಲಿಸಿದ ದುಬಾರಿ ಬೆಲೆಯ ಬೈಕ್‌ಗಳ ಹ್ಯಾಂಡ್ ಲಾಕ್ ಮುರಿದು ಕಳ್ಳತನ ಮಾಡುತ್ತಿದ್ದ. ಕದ್ದ ದಿನವೇ ಬೈಕ್‌ನಲ್ಲಿ ಊರಿಗೆ ಪರಾರಿಯಾಗುತ್ತಿದ್ದ.

ಬೆಂಗಳೂರು, ತಿರುಪತಿ, ಚಿತ್ತೂರು ಸೇರಿ ಹಲವೆಡೆ ಪ್ರಸಾದ್ ಬಾಬು ಬೈಕ್ ಕಳ್ಳತನ ಮಾಡಿದ್ದ. ಕದ್ದ ವಾಹನಗಳನ್ನು 15-20 ಸಾವಿರಕ್ಕೆ ಆಂಧ್ರದಲ್ಲಿ ಮಾರಾಟ ಮಾಡುತ್ತಿದ್ದ. ಈ ಹಣದಿಂದ ಮೋಜು ಮಸ್ತಿ ಮಾಡುತ್ತಿದ್ದ.

ಕೆಆರ್ ಪುರ ಪೊಲೀಸರು ಕಾರ್ಯಾಚರಣೆ ನಡೆಸಿ, 20 ರಾಯಲ್ ಎನ್‌ಫೀಲ್ಡ್, 30 ಫಲ್ಸರ್, 40 ಆಕ್ಟಿವಾ ಸೇರಿದಂತೆ ಒಟ್ಟು 100 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಲಾವಣ್ಯಾ ಕೊಲೆ ಪ್ರಕರಣ: ಆರೋಪಿ ಚೇತನ್ ಬಂಧನಕ್ಕೆ ಗಿರೀಶ್ ಧೈರ್ಯ

ಲಾವಣ್ಯಾ ಕೊಲೆ ಪ್ರಕರಣದ ಆರೋಪಿ ಚೇತನ್ ಬಂಧನಕ್ಕೆ ಸ್ಥಳೀಯ ಯುವಕ ಗಿರೀಶ್ ವಹಿಸಿದ ಸಾಹಸಮಯ ಪಾತ್ರದ ಸಂಪೂರ್ಣ ವಿವರ, ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಆಪ್ತರ ಭೇಟಿಗೆ ಕೋರ್ಟ್ ಸಮ್ಮತಿ

ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜೈಲಿನಲ್ಲಿ ಆಪ್ತರ ಭೇಟಿಗೆ ಅನುಮತಿ ನೀಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚಿಕ್ಕಮಗಳೂರು: ಪೂಜಾರಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ, ಪ್ರಕರಣ ದಾಖಲು

ಚಿಕ್ಕಮಗಳೂರಿನಲ್ಲಿ ಪೂಜಾರಿ ವಿರುದ್ಧ ಮಹಿಳೆ ಲೈಂಗಿಕ ದೌರ್ಜನ್ಯ ಆರೋಪಿಸಿ ದೂರು ನೀಡಿದ್ದಾರೆ. ಆರೋಪಿ ಪತ್ತೆಗೆ ಪೊಲೀಸ್ ಶೋಧ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು: ಗರ್ಲ್‌ಫ್ರೆಂಡ್ ಮಾತನಾಡದ ನೋವಿಗೆ 41 ವರ್ಷದ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರುದಲ್ಲಿ ಗರ್ಲ್‌ಫ್ರೆಂಡ್ ಮಾತನಾಡುತ್ತಿಲ್ಲ ಎಂಬ ಬೇಸರದಲ್ಲಿ 41 ವರ್ಷದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ