ಮಣಿಪಾಲದಲ್ಲಿ ಮಹಿಳೆಯ ಚಿನ್ನದ ಸರ ಎಗರಿಸಿದ ಆರೋಪಿ ಬಂಧನ

Date:

spot_img

ಉಡುಪಿ: ಮಣಿಪಾಲದ ಸರಳಬೆಟ್ಟುವಿನ ಸಂತೋಷ್ (ವಯಸ್ಸು 29) ಎಂಬಾತನನ್ನು 45 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕದ್ದುಕೊಂಡ ಪ್ರಕರಣದಲ್ಲಿ ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಮಾರ್ಚ್ 29ರಂದು ಸಂಜೆ 5:30ರ ಸುಮಾರಿಗೆ, ಕೆಎಂಸಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿರುವ ಮಹಿಳೆ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಸಂದರ್ಭದಲ್ಲಿ , ಆರೋಪಿ ಸಂತೋಷ್‌ ಆಕೆಯನ್ನು ಹಿಂಬಾಲಿಸಿ, ಮಣಿಪಾಲದ WGSHA ಕಾಲೇಜು ಹಿಂಭಾಗದಲ್ಲಿ ಕುತ್ತಿಗೆಗೆ ಕೈ ಹಾಕಿ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಠಾಣೆ ಪಿಐ ದೇವರಾಜ ಟಿವಿ ನೇತೃತ್ವದಲ್ಲಿ ಎಎಸ್‌ಐ ವಿವೇಕ್, ಹೆಡ್ ಕಾನ್ಸ್ಟೆಬಲ್ ಪ್ರಸನ್ನ, ಪಿಸಿ ಮಂಜುನಾಥ ಹಾಗೂ ಪಿಸಿ ರವಿರಾಜ್ ಒಳಗೊಂಡ ತಂಡ ಶ್ವಾನದಳದ ನೆರವಿನಿಂದ ತನಿಖೆ ಮುಂದುವರೆಸಿ, ಏಪ್ರಿಲ್ 3ರಂದು ಆರೋಪಿ ಸಂತೋಷ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

ಪೊಲೀಸರು ಆರೋಪಿ ಬಳಿ ₹3.5 ಲಕ್ಷ ಮೌಲ್ಯದ ಚಿನ್ನದ ಮಾಂಗಲ್ಯ ಸರವನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.