
ಕಾಪು: ಜನಪ್ರಿಯ ನಟ ಮತ್ತು ನಿರ್ದೇಶಕ ರಾಜ್ ಬಿ. ಶೆಟ್ಟಿ ಅವರು ಉಡುಪಿ ಜಿಲ್ಲೆಯ ಕಾಪು ತಾಲೂಕಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಹೊಸ ಮಾರಿಗುಡಿ ಕ್ಷೇತ್ರಕ್ಕೆ ಭೇಟಿ ನೀಡಿದರು. ಅವರು ದೇಗುಲ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸಿ ದೇವಿಯ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ದೇವಾಲಯದ ವತಿಯಿಂದ ರಾಜ್ ಬಿ. ಶೆಟ್ಟಿ ಅವರನ್ನು ಗೌರವಿಸಲಾಯಿತು. ಕಾಪು ಕ್ಷೇತ್ರದ ಕುರಿತು ಮಾತನಾಡಿದ ರಾಜ್ ಬಿ. ಶೆಟ್ಟಿ, “ನಾನು ಈ ಹಿಂದೆಯೂ ಈ ಕ್ಷೇತ್ರಕ್ಕೆ ಬಂದಿದ್ದೇನೆ. ಇದು ಬಹಳ ಸುಂದರವಾದ ದೇವಸ್ಥಾನ. ಇಲ್ಲಿ ಕೂತರೂ, ನಿಂತರೂ, ಕೈ ಮುಗಿದರೂ ದೇವಿ ಇಲ್ಲಿದ್ದಾಳೆ ಎಂಬುದು ಖಾತ್ರಿಯಾಗುತ್ತದೆ. ನನ್ನ ಹೊಸ ಸಿನಿಮಾ ಬಿಡುಗಡೆಯಾಗಲಿರುವುದರಿಂದ ದೇವರ ಆಶೀರ್ವಾದ ಪಡೆಯಲು ಬಂದೆ” ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಕಾಪು ಹೊಸ ಮಾರಿಗುಡಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ಸದಸ್ಯರು, ಅರ್ಚಕರು ಮತ್ತು ಭಕ್ತರು ಉಪಸ್ಥಿತರಿದ್ದರು.