ಮುದ್ರಾಡಿಯಲ್ಲಿ ಹದಿಹರೆಯದ ಸವಾಲುಗಳು – ಮಾಹಿತಿ ಕಾರ್ಯಗಾರ

Date:

spot_img

ಹೆಬ್ರಿ :ಬಾಲ್ಯದ ದಿನಗಳಲ್ಲಿ ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಕಲಿಕೆಯಲ್ಲಿ ತೊಡಗಿಸಿಕೊಳ್ಳುವುದು ವಿದ್ಯಾರ್ಥಿಗಳ ಜವಾಬ್ದಾರಿಯಾಗಿರುತ್ತದೆ. ಬಾಹ್ಯ ಪ್ರಚೋದನೆಗೆ ಒಳಗಾಗದೆ ಮಾನಸಿಕವಾಗಿ, ದೈಹಿಕವಾಗಿ ಸ್ಥಿರತೆಯನ್ನು ಕಾಪಾಡಿಕೊಂಡಾಗ ನಮ್ಮ ಜೀವನವು ಸುಂದರವಾಗುತ್ತದೆ. ಯಾವುದೋ ಒತ್ತಡಕ್ಕೆ ಬಲಿಯಾಗಿ ದುಶ್ಚಟಗಳಿಗೆ ದಾಸರಾಗಿ ಆರೋಗ್ಯವನ್ನು ಹಾಳುಮಾಡಿಕೊಳ್ಳಬೇಡಿ.ನಿಮ್ಮ ಜೀವನದ ಬಗ್ಗೆ ಕಾಳಜಿ ವಹಿಸುವ ತಂದೆ ತಾಯಿಗಳ, ಗುರು ಹಿರಿಯರ ಮಾರ್ಗದರ್ಶನವನ್ನು ಸದಾ ಪಡೆಯುತ್ತಾ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ಎನ್ ಸಿ ಡಿ ವಿಭಾಗದ ಆಪ್ತ ಸಮಾಲೋಚಕಿಯಾದ ಪವಿತ್ರಾರವರು ಹೇಳಿದರು.

ಅವರು ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವೃತ್ತಿ ಮಾರ್ಗದರ್ಶನ ಹಾಗೂ ಆಪ್ತ ಸಮಾಲೋಚನಾ ಘಟಕದ ವತಿಯಿಂದ ನಡೆದ “ಹದಿಹರೆಯದ ಮಕ್ಕಳು ಎದುರಿಸುವ ಸವಾಲುಗಳು ” ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರದಲ್ಲಿ ಮಾತನಾಡಿದರು.

ಕಾರ್ಯಕ್ರಮದಲ್ಲಿಆರೋಗ್ಯ ಕೇಂದ್ರದ ಐಸಿಟಿಸಿ ವಿಭಾಗದ ಆಪ್ತ ಸಮಾಲೋಚಕಿ ಸರಸ್ವತಿ, ವಿದ್ಯಾರ್ಥಿ ನಾಯಕ ಕಾರ್ತಿಕ್ ಉಪಸ್ಥಿತರಿದ್ದರು. ಶಾಲೆಯ ಮುಖ್ಯ ಶಿಕ್ಷಕ ಬಲ್ಲಾಡಿ ಚಂದ್ರಶೇಖರ ಭಟ್ ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ವಿದ್ಯಾರ್ಥಿನಿ ಅಂಜಲಿ ಕಾರ್ಯಕ್ರಮ ನಿರೂಪಿಸಿ, ಶೋಭಿತ್ ಯು. ಪೂಜಾರಿ ವಂದಿಸಿದರು. ಶಿಕ್ಷಕರಾದ ಶ್ಯಾಮಲಾ, ಚಂದ್ರಕಾಂತಿ ಹೆಗ್ಡೆ, ಮಹೇಶ್ ನಾಯ್ಕ್ ಸಹಕರಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.