spot_img

ರಾಣಿಯರಾದ ಅಬ್ಬಕ್ಕ, ಕಿತ್ತೂರು ಚೆನ್ನಮ್ಮ, ಅಹಲ್ಯೆ ಬಾಯಿಯರ ಸಾಹಸ ಮಹಿಳೆಯರಿಗೆ ಸ್ಪೂರ್ತಿ : ಡಾ ಮೇಘಾ ಖಂಡೇಲವಾಲ

Date:

ಕಲಬುರ್ಗಿ : ಸ್ವಾತಂತ್ರ್ಯ ಹೋರಾಟದಲ್ಲಿ ಮಹಿಳೆಯರು ಪ್ರಮುಖ ಪಾತ್ರ ವಹಿಸಿದ್ದರು. ಪೋರ್ಚುಗೀಸರಿಗೆ ಸಿಂಹಸ್ವಪ್ನವಾಗಿದ್ದ ಉಲ್ಲಾಳದ ರಾಣಿ ಅಬ್ಬಕ್ಕಳ ಜೀವನ, ಶೌರ್ಯ, ಸಾಹಸ ಇಂದಿನ ಮಹಿಳೆಯರಿಗೆ ಸ್ಫೂರ್ತಿ. ಅಬ್ಬಕ್ಕಳ ಸ್ವಾಭಿಮಾನ, ಧೈರ್ಯ ಇಂದಿನ ಮಹಿಳೆಯರಲ್ಲಿ ಇರಬೇಕು ಎಂದು ಕೇಂದ್ರೀಯ ವಿಶ್ವವಿದ್ಯಾಲಯದ ಗಣಿತ ವಿಭಾಗದ ಮುಖ್ಯಸ್ಥರಾದ ಡಾ ಮೇಘಾ ಖಂಡೇಲವಾಲ ಹೇಳಿದರು.

ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಮಹಿಳಾ ಯೋಧರು ರಾಣಿ ಅಬ್ಬಕ್ಕ ಚೌತ್, ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಲೋಕಮಾತೆ ಅಹಲ್ಯೆ ಬಾಯಿ ಹೋಳ್ಕರ್ ಇವರುಗಳ ಜೀವನದ ಕುರಿತು ಒಂದು ದಿನದ ವಿಚಾರ ಸಂಕಿರಣದ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡುತ್ತಿದ್ದರು.

ರಾಣಿ ಅಬ್ಬಕ್ಕ ಕೆಚ್ಚೆದೆಯ ಹೋರಾಟದಿಂದ ಉಲ್ಲಾಳಕ್ಕೆ ಜಯ ದೊರೆತಿತ್ತು. ಭಾರತದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ಮಹಿಳೆಯರಿಗೆ ಅಧಿಕಾರ, ಗೌರವ ನೀಡಲಾಗುತ್ತಿದೆ. ರಾಣಿ ಅಬ್ಬಕ್ಕ, ಕಿತ್ತೂರು ರಾಣಿ ಚೆನ್ನಮ್ಮ, ಅಹಲ್ಯೆ ಬಾಯಿ ಹೋಳ್ಕರ್, ಒನಕೆ ಓಬವ್ವ ಅವರಂತಹ ಶಕ್ತಿಶಾಲಿ ಮಹಿಳೆಯರು ಅದಕ್ಕೆ ಸಾಕ್ಷಿ ಎಂದು ಹೇಳಿದರು.

ಕಾಲೇಜಿನ ಪ್ರಾಧ್ಯಾಪಕಿ ಹಾಗೂ ಮಹಿಳಾ ಕೋಶದ ಸಂಚಾಲಕಿ ಡಾ ಮೈತ್ರಾದೇವಿ ಹಳೆಮನಿ ಮಾತನಾಡಿ ರಾಣಿ ಅಬ್ಬಕ್ಕ, ಕಿತ್ತೂರು ಚೆನ್ನಮ್ಮ , ಅಹಲ್ಯೆ ಬಾಯಿ ಹೋಳ್ಕರ್ ಇವರು ಕೇವಲ ರಾಣಿಯರು ಮಾತ್ರ ಅಲ್ಲ ಇತಿಹಾಸ ಬದಲಿಸಿದ ವೀರನಾರಿಯರು. ಅವರ ಜೀವನ ಸಾಧನೆ ಬಾಲ್ಯದಿಂದಲೇ ವಿದ್ಯಾರ್ಥಿಗಳಿಗೆ ತಿಳಿಸಬೇಕಾಗಿದೆ. ಈ ದಿಶೆಯಲ್ಲಿ ಸರ್ಕಾರಗಳು ಪಠ್ಯ ಪುಸ್ತಕಗಳಲ್ಲಿ ಇವರ ನೈಜ ಜೀವನ ಚರಿತ್ರೆಗಳನ್ನು ತಿಳಿಸಬೇಕು ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶಿಲ್ಪಾ ಅಲ್ಲದ, ರಾಜಶೇಖರ ಬೀರನಳ್ಳಿ, ಡಾ ನೀಲಕಂಠ ವಾಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಮಲ್ಲಪ್ಪ ಬೋತಗಿ ವಹಿಸಿದ್ದರು.ರಾಷ್ಟೀಯ ಸೇವಾ ಯೋಜನೆ ಅಧಿಕಾರಿಗಳಾದ ಡಾ ಪ್ರಾಣೇಶ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಆಪಲ್‌ನಿಂದ ಐಫೋನ್ ಲೋಕಕ್ಕೆ ಹೊಸ ಸ್ಪರ್ಧಿ: ಅತಿ ತೆಳುವಾದ ‘ಐಫೋನ್ ಏರ್’ ಅನಾವರಣ!

ಅತಿ ತೆಳುವಾದ ಐಫೋನ್ 'ಏರ್' ಮಾದರಿ, ಹೊಸ ವೈಶಿಷ್ಟ್ಯಗಳೊಂದಿಗೆ ಐಫೋನ್ 17, ಸುಧಾರಿತ ಏರ್‌ಪಾಡ್ಸ್ ಪ್ರೊ 3 ಮತ್ತು ರಕ್ತದೊತ್ತಡ ಮಾನಿಟರ್ ಹೊಂದಿರುವ ಆಪಲ್ ವಾಚ್.

ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ. ರಾಧಾಕೃಷ್ಣನ್ ಆಯ್ಕೆ

ಭಾರತದ 17ನೇ ಉಪರಾಷ್ಟ್ರಪತಿಯಾಗಿ ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಮತ್ತು ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಆಯ್ಕೆಯಾಗಿದ್ದಾರೆ.

ಸಾಂಬಾರಿಗೆ ರುಚಿ ಮಾತ್ರವಲ್ಲ, ಆರೋಗ್ಯಕ್ಕೂ ಒಳ್ಳೆಯದು: ಕೆಂಪು ಮೆಣಸಿನಕಾಯಿಯ ಪ್ರಯೋಜನಗಳು

ಅಡುಗೆಮನೆಯಲ್ಲಿ ಸಾಮಾನ್ಯವಾಗಿ ಬಳಸುವ ಕೆಂಪು ಮೆಣಸಿನಕಾಯಿ ಕೇವಲ ಆಹಾರಕ್ಕೆ ಖಾರ ಮತ್ತು ರುಚಿ ನೀಡುವುದಷ್ಟೇ ಅಲ್ಲ, ಇದು ಅನೇಕ ಆರೋಗ್ಯಕಾರಿ ಗುಣಗಳನ್ನು ಸಹ ಹೊಂದಿದೆ.

ದಾವಣಗೆರೆಯಲ್ಲಿ ರಾಜ್ಯಮಟ್ಟದ “ಕುಪ್ಮಾ” ಸಮಾವೇಶ

ಕುಪ್ಮಾದ ರಾಜ್ಯಮಟ್ಟದ ದ್ವಿತೀಯ ಸಮಾವೇಶವು 2025ರ ಸೆಪ್ಟೆಂಬರ್ ತಿಂಗಳಲ್ಲಿ ದಿನಾಂಕ 12 ಮತ್ತು 13ರಂದು 'ಎಸ್. ಎಸ್. ಮಲ್ಲಿಕಾರ್ಜುನ ಕಲ್ಚರಲ್ ಸೆಂಟರ್, ಬಿಐಇಟಿ, ದಾವಣಗೆರೆ, ಇಲ್ಲಿ ನಡೆಯಲಿದೆ.