
ಬೆಂಗಳೂರು: ಎಐಸಿಸಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಸದ್ಯ ಅವರು ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿರಿಯ ವೈದ್ಯರ ತಂಡವು ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ.
ನಿನ್ನೆಯಷ್ಟೇ ಖರ್ಗೆ ಅವರು ತಮ್ಮ ಎಂದಿನ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದಲ್ಲಿ ಉಂಟಾದ ಭಾರಿ ಪ್ರವಾಹ ಮತ್ತು ಬೆಳೆ ಹಾನಿ ಕುರಿತು ಮಾತನಾಡಿದ್ದರು. ಅಲ್ಲದೆ, ಪ್ರವಾಹ ಪೀಡಿತ ಪ್ರದೇಶಗಳಿಗೆ ಶೀಘ್ರ ಪರಿಹಾರ ನೀಡುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವರು ವಿವರವಾದ ಪತ್ರವನ್ನೂ ಬರೆದು ಮನವಿ ಮಾಡಿದ್ದರು. ಚಟುವಟಿಕೆಗಳ ನಡುವೆಯೇ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.