ತರಬೇತಿ ವೇಳೆ ಪ್ಯಾರಾಚೂಟ್ ತೆರೆದುಕೊಳ್ಳದೆ ವಾಯುಪಡೆಯ ಅಧಿಕಾರಿ ದುರ್ಮರಣ!

Date:

spot_img

ಶಿವಮೊಗ್ಗ: ವಾಯುಪಡೆಯ ತರಬೇತಿ ವೇಳೆ ಪ್ಯಾರಾಚೂಟ್ ತೆರೆದುಕೊಳ್ಳದೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಮೂಲದ ವಾಯುಪಡೆಯ ವಾರಂಟ್ ಅಧಿಕಾರಿ ಮಂಜುನಾಥ್ ಜಿ.ಎಸ್ (36) ಅವರು ಉತ್ತರ ಪ್ರದೇಶದ ಆಗ್ರಾದಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ.

ಆಗ್ರಾದ ಮಾಲ್ಪುರ ಪ್ಯಾರಾಚೂಟ್ ಡ್ರಾಪ್ ಜೋನ್‌ನಲ್ಲಿ ತರಬೇತಿ ನಡೆಯುತ್ತಿತ್ತು, ಇದರಲ್ಲಿ 12 ಅಧಿಕಾರಿಗಳು ಪಾಲ್ಗೊಂಡಿದ್ದರು. 11 ಮಂದಿ ಸುರಕ್ಷಿತವಾಗಿ ಭೂಮಿಯ ಮೇಲೆ ಇಳಿದರೆ, ಮಂಜುನಾಥ್ ಪ್ಯಾರಾಚೂಟ್ ವಿಫಲಗೊಂಡು ನಾಪತ್ತೆಯಾಗಿದ್ದರು. ಶೋಧ ಕಾರ್ಯಾಚರಣೆಯ ನಂತರ, ಸಮೀಪದ ಜಮೀನಿನಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾದರೂ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಮೂಲತಃ ಹೊಸನಗರ ತಾಲೂಕಿನ ಸಂಕೂರು ಗ್ರಾಮದವರಾದ ಮಂಜುನಾಥ್, ಕೃಷಿಕ ಕುಟುಂಬದಿಂದ ಬಂದವರು. ಅವರು ಅಸ್ಸಾಂನ ತಾಂತ್ರಿಕ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು. ಪತ್ನಿ ಹಾಗೂ ಒಂದು ಮಗುವನ್ನು ಅವರು ಅಗಲಿದ್ದಾರೆ. ಈ ಘಟನೆ ಅವರ ಕುಟುಂಬಕ್ಕೆ ಭಾರೀ ದುಃಖ ತಂದಿದ್ದು, ಶನಿವಾರ ರಾತ್ರಿ ಪಾರ್ಥೀವ ಶರೀರ ಬೆಂಗಳೂರಿಗೆ ತಲುಪುವ ನಿರೀಕ್ಷೆ ಇದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ